This is the title of the web page
This is the title of the web page

ಮಹಿಳೆಯರು ಸ್ವಾವಲಂಬಿಗಳಾಗಿ ಜೀವನ ನಡೆಸಿ: ರೂಪಾ ನಾಗರಾಜ್

ಕೆಂಗೇರಿ; ಇಂದಿನ ದಿನಗಳಲ್ಲಿ ಮಹಿಳೆಯರು ಯಾವುದಕ್ಕೂ ಕಡಿಮೆ ಇಲ್ಲದ ರೀತಿಯಲ್ಲಿ ಹಲವಾರು ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾಳೆ. ಅವಳಿಗೆ ಸರಿಸಾ ಟಿಯಾಗಿ ಯಾರೂ ನಿಲ್ಲಲು ಸಾಧ್ಯವಾಗುತ್ತಿಲ್ಲ. ಅವಳು ಸ್ವಾವಲಂಬಿ ಜೀವನ ಶೈಲಿ ರೂಪಿಸಿಕೊಂಡು ಬದುಕುವುದನ್ನು ಕಲಿತಿದ್ದಾರೆ ಎಂದು ರೂಪಾನಾಗರಾಜ್ ಹೇಳಿದರು.ಅಶ್ರಯ ಮಹಿಳಾ ಸಮಾಜದಿಂದ ಬಿಡಿಎ ಜ್ಞಾನಭಾರತಿ ಎನ್ ಕ್ಲೈವ ಬಡಾವಣೆಯಲ್ಲಿ ಆಯೋಜಿಸಿದ್ದ ಮಹಿಳಾ ದಿನಾಚರಣೆಯಲ್ಲಿ ಮಾತನಾಡಿದರು.

ಇದೇ ವೇಳೆ ಮಹಿಳೆಯರಿಗಾಗಿ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು , ಕ್ರೀಡೆ, ಗೀತ ಗಾಯನ, ಸಂಗೀತ, ನೃತ್ಯ ಪ್ರದರ್ಶನ ಮುಂತಾದ ಕಾರ್ಯಕ್ರಮ ನಡೆಸಿದರು. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು ತಮ್ಮ ಶಾಸಕರ ಕಚೇರಿಯಲ್ಲಿ ಉಚಿತವಾಗಿ ಮಹಿಳಾ ಸ್ವ ಸಹಾಯ ಸಂಘಗಳ ನೋಂದಣಿ ಮಾಡಿಕೊಡುವ ವ್ಯವಸ್ಥೆ ಮಾಡಿದ್ದು ಅದನ್ನು ಸದುಪಯೋಗ ಪಡಿಸಿಕೊಂಡು ಉತ್ತಮ ರೀತಿಯಲ್ಲಿ ಜೀವನ ಮಟ್ಟಕಂಡುಕೊಳ್ಳಬೇಕು ಎಂದರು. ಅಶ್ರಯ ಮಹಿಳಾ ಸಮಾಜದ ಎಲ್ಲಾ ಪದಾಧಿಕಾರಿಗಳು ಮತ್ತು ಸದಸ್ಯರು ಹಲವಾರು ಮಹಿಳೆಯರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.