ಅಯೋಧ್ಯೆ: ಹಿಂದೂ ಧರ್ಮೀಯರ ಬಹುದಿನಗಳ ಕನಸು ಅಯೋಧ್ಯೆಯ ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಗಣ್ಯಾತಿಗಣ್ಯರಿಗೆ ಆಹ್ವಾನ ನೀಡಲಾಗಿದೆ.
ಈ ಗಣ್ಯರ ಸಾಲಿನಲ್ಲಿ ಕ್ರಿಕೆಟ್ ದಿಗ್ಗಜರಾದ ಸಚಿನ್ ತೆಂಡುಲ್ಕರ್, ವಿರಾಟ್ ಕೊಹ್ಲಿ ಸೇರಿದ್ದಾರೆ.2024 ರ ಜನವರಿ 22 ರಂದು ರಾಮಮಂದಿರ ಲೋಕಾರ್ಪಣೆಯಾಗಲಿದೆ.ಈ ಕಾರ್ಯಕ್ರಮಕ್ಕೆ ಸುಮಾರು 8000 ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಈ ಪಟ್ಟಿಯಲ್ಲಿ ಕೊಹ್ಲಿ, ಸಚಿನ್ ಕೂಡಾ ಸೇರಿದ್ದಾರೆ.
ಇವರಲ್ಲದೆ, ಸಿನಿ ಕ್ಷೇತ್ರದಿಂದ ಅಮಿತಾಭ್ ಬಚ್ಚನ್, ಅಕ್ಷಯ್ ಕುಮಾರ್, ಉದ್ಯಮಿ ಮುಕೇಶ್ ಅಂಬಾನಿ, ರತನ್ ಟಾಟಾ, ಗೌತಮ್ ಅದಾನಿ ಮುಂತಾದ ಗಣ್ಯರನ್ನು ಆಹ್ವಾನಿಸಲಾಗಿದೆ.
8000 ಮಂದಿ ಪೈಕಿ 6000 ಧಾರ್ಮಿಕ ನಾಯಕರು, 2000 ಮಂದಿ ವಿವಿಧ ಕ್ಷೇತ್ರಗಳಲ್ಲಿ ಹೆಸರು ಮಾಡಿದ ಖ್ಯಾತ ನಾಮರು ಇರಲಿದ್ದಾರೆ. ಸಿನಿಮಾ, ಕ್ರಿಕೆಟ್, ಉದ್ಯಮ ಕ್ಷೇತ್ರ ಮಾತ್ರವಲ್ಲದೆ, ಭಾರತೀಯ ಸೇನೆ, ಸಾಹಿತಿಗಳು ಸೇರಿದಂತೆ ಗಣ್ಯಾತಿಗಣ್ಯರನ್ನು ಆಹ್ವಾನಿಸಲಾಗಿದೆ.