ಬೆಂಗಳೂರು: ಮಹಿಳೆಯರ ಸುರಕ್ಷತೆಗೆ ನಗರದ 30 ಕಡೆಗಳಲ್ಲಿ ಸೇಫ್ಟಿ ಐಲ್ಯಾಂಡ್ ವ್ಯವಸ್ಥೆ ಜಾರಿ ಮಾಡಿದ್ದೇವೆ. ನಗರದ ನಿಗದಿತ ಪ್ರದೇಶದಲ್ಲಿ ಅಲಾರಾಂ ಇರಲಿದೆ. ಬಟನ್ ಒತ್ತಿದರೆ ತಕ್ಷಣ ಪೊಲೀಸರು ಸ್ಥಳಕ್ಕೆ ಬರುತ್ತಾರೆ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದ್ದಾರೆ.
ವಿಧಾನಪರಿಷತ್ನಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಉತ್ತರಿಸಿದ ಅವರು, ಅಪರಾಧಿಗಳನ್ನು ಹಿಡಿಯಲು ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಕೂಡ ಬಳಕೆ ಮಾಡುತ್ತಿದ್ದೇವೆ. ಪೊಲೀಸರ ಪ್ರತಿಕ್ರಿಯೆ ಸಮಯ ಕೂಡ ವೇಗವಾಗಿ ಮಾಡುವ ಪ್ರಯತ್ನ ನಡೆದಿದೆ ಎಂದು ತಿಳಿಸಿದ್ದಾರೆ.