This is the title of the web page
This is the title of the web page

ಮತದಾರರು ಆಶೀರ್ವದಿಸುವ ಭರವಸೆ: ಶರತ್ ಬಚ್ಚೇಗೌಡ

ಹೊಸಕೋಟೆ: ತಾಲೂಕಿನಲ್ಲಿ ದಾಖಲೆಯ ಪ್ರಮಾಣದಲ್ಲಿ ಮತದಾನವಾಗಿದ್ದು ತಮ್ಮ ಅಭಿವೃದ್ಧಿ ಕಾರ್ಯಗಳೊಂದಿಗೆ ಅಧಿಕಾರ ನಡೆಸಿದ ಬಿಜೆಪಿ ಸರಕಾರದ ವೈಫಲ್ಯಗಳ ಬಗ್ಗೆ ಬೇಸತ್ತು ಮತದಾರರು ತಮ್ಮನ್ನು ಆಶೀರ್ವದಿಸುವ ವಿಶ್ವಾಸವಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದ್ದಾರೆ.

ತಾಲೂಕಿನ ಎಲ್ಲಾ 293 ಮತಕೇಂದ್ರಗಳಲ್ಲೂ ಶಾಂತಿಯುತವಾಗಿ ಮತದಾನವಾಗಿದ್ದು ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಎಲ್ಲರಿಗೂ ತಮ್ಮ ಅಭಿನಂದನೆಗಳನ್ನು ತಿಳಿಸಿದ್ದಾರೆ.

ನಾಮಪತ್ರ ಸಲ್ಲಿಕೆ ಹಾಗೂ ಚುನಾವಣಾ ಪ್ರಚಾರಕ್ಕೆ ತೆರಳಿದ್ದ, ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ರೋಡ್‍ಶೋ ಸಂದರ್ಭದಲ್ಲಿ ಎಲ್ಲಾ ಜಾತಿ, ಧರ್ಮ, ಜನಾಂಗದವರು ಸಕ್ರಿಯವಾಗಿ ಭಾಗವಹಿಸುವ ಮೂಲಕ ವ್ಯಕ್ತಪಡಿಸಿರುವ ಬೆಂಬಲ ತಮ್ಮ ಗೆಲುವಿಗೆ ಸಹಕಾರಿ ಯಾಗಲಿದೆ ಎಂದು ಶರತ್ ಬಚ್ಚೇಗೌಡ ಹೇಳಿದರು.