ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಭಾಮೈದ ಮಂಜುನಾಥ್ ಅವರ ಮನೆ ಮೇಲೆ ಇ.ಡಿ. ದಾಳಿ ನಡೆದಿದೆ. ಬೆಳಗಾವಿಯ ಅಬಕಾರಿ ಇಲಾಖೆ ಹೆಚ್ಚುವರಿ ಆಯುಕ್ತರಾಗಿರುವ ವೈ. ಮಂಜುನಾಥ್ ಎಂಬುವರ ಮನೆ ಮೇಲೆ ದಾಳಿ ನಡೆಸಿ ದಾಖಲೆ ಪತ್ರ ಪರಿಶೀಲನೆ ನಡೆಸಲಾಗುತ್ತಿದೆ. ಬೆಳಗಾವಿಯ ಹನುಮಂತನಗರ ದಲ್ಲಿರುವ ನಿವಾಸ, ಬೆಂಗಳೂರಿನ ಅಪಾರ್ಟ್ಮೆಂಟ್, ಹರಪನಹಳ್ಳಿ ತಾಲೂಕಿನ ಅರಸೀಕೆರೆ ಗ್ರಾಮದ ನಿವಾಸ ಸೇರಿದಂತೆ ಹಲವು ಕಡೆ ದಾಖಲೆ ಪತ್ರ ಪರಿಶೀಲನೆ ನಡೆಸಲಾಗುತ್ತಿದೆ.



