ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶವನ್ನು ಉಪಚುನಾವಣೆಯ ಮತದಾನ ಪ್ರಕ್ರಿಯೆ ಪೂರ್ಣಗೊಂಡ ನಂತರ ಬಿಡುಗಡೆ ಮಾಡಲು ನಿರ್ಧರಿಸಿದೆ.
ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನವು ನಾಳೆ ನಡೆಯಲಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಫಲಿತಾಂಶ ಪ್ರಕಟಿಸಲು ಅನುಮತಿ ಕೋರಿ ಮಂಡಳಿಯು ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು.
ಚುನಾವಣಾ ಆಯೋಗದಿಂದ ಈವರೆಗೆ ಯಾವುದೇ ಅಧಿಕೃತ ಉತ್ತರ ಬಂದಿಲ್ಲ. ಈ ಹಿನ್ನೆಲೆಯಲ್ಲಿ, ನೀತಿ ಸಂಹಿತೆಯ ಅಡ್ಡಿ ಉಂಟಾಗದAತೆ ಮತದಾನ ಮುಗಿದ ನಂತರವಷ್ಟೇ ಫಲಿತಾಂಶ ಪ್ರಕಟಿಸುವುದು ಸೂಕ್ತ ಎಂಬ ತೀರ್ಮಾನಕ್ಕೆ ಬರಲಾಗಿದೆ.
ನಾಳೆ ಸಂಜೆ ಮತದಾನ ಮುಗಿದ ಕೂಡಲೇ ಫಲಿತಾಂಶ ನೀಡಲು ಅವಕಾಶವಿದ್ದರೂ, ಸಂಜೆಯ ವೇಳೆಗೆ ಫಲಿತಾಂಶ ಪ್ರಕಟಿಸಿದರೆ ಶಾಲೆ-ಕಾಲೇಜುಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತಾಂತ್ರಿಕವಾಗಿ ತೊಂದರೆಯಾಗಬಹುದು ಎಂದು ಅಂದಾಜಿಸಲಾಗಿದೆ. ಈ ಎಲ್ಲಾ ಕಾರಣಗಳಿಂದಾಗಿ ಏಪ್ರಿಲ್ 10, ಶುಕ್ರವಾರದಂದು ಫಲಿತಾಂಶ ಪ್ರಕಟಿಸುವುದು ಸೂಕ್ತ ಎಂದು ಮಂಡಳಿಯು ಸರ್ಕಾರಕ್ಕೆ ಮಾಹಿತಿ ನೀಡಿದೆ ಎಂದು ಮೂಲಗಳು ತಿಳಿಸಿವೆ.
ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಆತಂಕ ಪಡುವ ಅಗತ್ಯವಿಲ್ಲ. ಈ ಕೆಳಗಿನ ಅಧಿಕೃತ ವೆಬ್ಸೈಟ್ಗಳ ಮೂಲಕ ಸುಲಭವಾಗಿ ನಿಮ್ಮ ಅಂಕಪಟ್ಟಿಗಳನ್ನು ವೀಕ್ಷಿಸಬಹುದು:
(karresults.nic.in), (kseab.karnataka.gov.in) ಪರ್ಯಾಯ ವ್ಯವಸ್ಥೆ:ಒಂದು ವೇಳೆ ಹೆಚ್ಚಿನ ಸಂಚಾರದ (Traffic) ಕಾರಣದಿಂದ ವೆಬ್ಸೈಟ್ ವಿಳಂಬವಾದರೆ, ವಿದ್ಯಾರ್ಥಿಗಳು ಡಿಜಿಲಾಕರ್ (Digilocker) ಮೂಲಕವೂ ತಮ್ಮ ಫಲಿತಾಂಶವನ್ನು ಪಡೆಯಬಹುದು: digilocker.gov.iಟn
ಮತದಾನ ಬಳಿಕ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ



