ಕನಕಪುರ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಮನಗರದಲ್ಲಿ ನಡೆದಿದ್ದ ಸ್ವಂತ ಕನ್ನಡ ಕಥೆ ಬರೆಯುವ ಸ್ಪರ್ಧೆಯಲ್ಲಿ ನಗರದ ಗ್ರಾಮಾಂತರ ಬಾಲಕಿ ಯರ ಪ್ರೌಢಶಾಲೆ ಶಾಲೆಯ ವಿದ್ಯಾರ್ಥಿನಿ ಕುಮಾರಿ ಬಿ.ಎಸ್.ಮಧುಶ್ರೀ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.
ಬಾಲಕಿಯ ಸಾಧನೆಗೆ ಆರ್. ಇ. ಎಸ್. ಸಂಸ್ಥೆಯ ಅಧ್ಯಕ್ಷ ಹೆಚ್. ಕೆ. ಶ್ರೀಕಂಠು,ಸಂಸ್ಥೆಯ ನಿರ್ದೇಶಕರುಗಳು ಹಾಗೂ ಶಾಲೆಯ ಮುಖ್ಯಶಿಕ್ಷಕ, ಶಿಕ್ಷಕ ಸಿಬ್ಬಂದಿ ಮತ್ತು ಶಿಕ್ಷಕೇತರ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿ ಶುಭ ಹಾರೈಸಿದ್ದಾರೆ.