ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ಸಚಿವ ರಾಮಚಂದ್ರೇಗೌಡ (88) ಅವರು ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.ರಾಮಚಂದ್ರೇಗೌಡ ಅವರು ವಿಧಾನಪರಿಷತ್ ಸದಸ್ಯರಾಗಿ ಒಟ್ಟು 6 ಬಾರಿ ಸುದೀರ್ಘ ಸೇವೆ ಸಲ್ಲಿಸಿದ್ದರು.ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಪ್ರಮುಖ ಖಾತೆಗಳನ್ನು ನಿಭಾಯಿಸಿದ ಅನುಭವ ಹೊಂದಿದ್ದರು. ಅವರ ನಿಧನಕ್ಕೆ ನಾಡಿನ ಹಲವು ಗಣ್ಯರು, ರಾಜಕೀಯ ಮುಖಂಡರು ತೀವ್ರ ಸಂತಾಪ ಸೂಚಿಸಿದ್ದಾರೆ.



