ಬೆಂಗಳೂರು: ವಿಧಾನಮಂಡಲದ ಅಧಿವೇಶನದ ಅವಧಿಯನ್ನು ಒಂದು ದಿನದ ಮಟ್ಟಿಗೆ ಮೊಟಕುಗೊಳಿಸಲಾಗಿದೆ.
ಇಂದು ನಡೆದ ವಿಧಾನಸಭಾ ಕಾರ್ಯಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಈ ತಿಂಗಳ 27ರವರೆಗೆ ನಡೆಯಬೇಕಿದ್ದ ಕಲಾಪವನ್ನು 26ರಂದೇ ಮುಕ್ತಾಯಗೊಳಿಸಲು ನಿರ್ಧರಿಸಲಾಗಿದೆ.
ಉಪಚುನಾವಣೆ ಹಾಗೂ ಶ್ರೀರಾಮನವಮಿ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
ವಿಧಾನಸಭೆ ಪಶ್ಚಿಮ ಪ್ರವೇಶ ದ್ವಾರ ಉದ್ಘಾಟನೆ ಹಾಗೂ 2026 ನೇ ಸಾಲಿನಲ್ಲಿ ಸದಸ್ಯತ್ವದ ಅವಧಿ ಪೂರ್ಣಗೊಳಿಸುತ್ತಿರುವ ಸದಸ್ಯರ ಜತೆ ಗ್ರೂಪ್ ಫೋಟೋ ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಪಾಲ್ಗೊಂಡರು. ಸಿಎಂ ಸಿದ್ದರಾಮಯ್ಯ, ವಿಧಾನಸಭೆ ಸ್ಪೀಕರ್ ಯು ಟಿ ಖಾದರ್, ವಿರೋಧ ಪಕ್ಷದ ನಾಯಕ ಆರ್ ಅಶೋಕ್, ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಚಿವರಾದ ಎಚ್ ಕೆ ಪಾಟೀಲ್, ಜಿ ಪರಮೇಶ್ವರ, ಬೋಸರಾಜ್ ಮತ್ತಿತರರು ಉಪಸ್ಥಿತರಿದ್ದರು.
ಅಧಿವೇಶನ ಮೊಟಕು



