ಲಂಡನ್: ಲಾರ್ಡ್ ಎಂಬ ಹೆಸರಿನಿಂದ ಪ್ರಸಿದ್ಧವಾಗಿರುವ ಭಾರತ ತಂಡದ ಆಲ್ರೌಂಡರ್ ಶಾರ್ದೂಲ್ ಠಾಕೂರ್ ಅವರ ಪಾದದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ನಡೆದಿದ್ದು, ಕನಿಷ್ಠ ಮೂರು ತಿಂಗಳುಗಳ ಕಾಲ ಅವರು ಕ್ರಿಕೆಟ್ನಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ.
32 ವರ್ಷ ವರ್ಷದ ಶಾರ್ದೂಲ್ ಬುಧವಾರ ಲಂಡನ್ನಲ್ಲಿ ತಮ್ಮ ಪಾದದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಶಸ್ತ್ರಚಿಕಿತ್ಸೆ ಯಶಸ್ವಿಯಾದ ಫೋಟೊವನ್ನು ಶಾರ್ದೂಲ್ ತಮ್ಮ ಇನ್ಸ್ಟಾಗ್ರಾಮ್ ಮತ್ತು ಟ್ವಿಟರ್ ಎಕ್ಸ್ನಲ್ಲಿ ಹಂಚಿಕೊಂಡಿದ್ದು ಶೀಘ್ರದಲ್ಲೇ ಗುಣಮುಖರಾಗಿ ಮತ್ತೆ ನಿಮ್ಮ ಮುಂದೆ ಆಡಲಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಕೇಂದ್ರಿಯ ಗುತ್ತಿಗೆಯಲ್ಲಿ ಅವರು ‘ಸಿ’ ಗ್ರೇಡ್ ವ್ಯಾಪ್ತಿಯಲ್ಲಿರುವ ಕಾರಣ ಅವರ ಚಿಕಿತ್ಸೆಯ ವೆಚ್ಚವನ್ನು ಬಿಸಿಸಿಐ ಭರಿಸಲಿದೆ.