ಬೆಂಗಳೂರು: ಕೆ. ಶಿವರಾಮ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಅವರ ಪಾರ್ಥಿವ ಶರೀರವನ್ನು ಇಡಲಾಗಿದೆ. ಚಿತ್ರರಂಗದ ಸೆಲೆಬ್ರಿಟಿಗಳು, ಕಲಾವಿದರು ಹಾಗೂ ಅಭಿಮಾನಿಗಳು ಇಲ್ಲಿಗೆ ಆಗಮಿಸಿ ಅಂತಿಮ ದರ್ಶನ ಪಡೆಯಲಿದ್ದಾರೆ.
ಐಎಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸುವಾಗ ನಟನಾದ ದೇಶದ ಎಕೈಕ ವ್ಯಕ್ತಿ ಎನ್ನುವ ಹೆಗ್ಗಳಿಕೆ ಶಿವರಾಮ್ ಅವರಿಗೆ ಸಲ್ಲಿಕೆ ಆಗುತ್ತದೆ. ಶಿವರಾಮ್ ಅವರು ಸಾಕಷ್ಟು ಸಾಮಾಜಿಕ ಕೆಲಸಗಳನ್ನು ಮಾಡಿದ್ದಾರೆ. ಈ ಮೂಲಕ ಅವರು ಎಲ್ಲರ ಮೆಚ್ಚುಗೆ ಪಡೆದಿದ್ದಾರೆ. ಶಿವರಾಮ್ ಪಾರ್ಥಿವ ಶರೀರದ ಎದುರು ಅವರ ಕುಟುಂಬ ಕಣ್ಣೀರು ಹಾಕಿದೆ.