ದೇವನಹಳ್ಳಿ: ಬೇಸಿಗೆಯಲ್ಲಿ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಆಭಾವ ಸೃಷ್ಟಿ ಆಗದಂತೆ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ಧತೆ ಕೈಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ ಅಧಿಕಾರಿಗಳಿಗೆ ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳು ಹಾಗು ಇತರ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಗ್ರಾಮಾಂತರ ಜಿಲ್ಲೆಯ ಪಟ್ಟಣಗಳಲ್ಲಿ ಕುಡಿಯುವ ನೀರು ಸಮಸ್ಯೆ ಆಗದಂತೆ ಅಗತ್ಯ ಸಿದ್ದತೆ ಮಾಡಿಕೊಳ್ಳಲು ಸೂಚಿಸಿದರು.
ಮುಂಗಡವಾಗಿ ಖಾಸಗಿ ಕೊಳವೆ ಬಾವಿ ಗಳನ್ನು ಕಾಯ್ದಿರಿಸಿ ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ವಹಿಸಿ. ಜಾನುವಾರುಗಳಿಗೆ ಮೇವಿನ ಅಭಾವ ಸೃಷ್ಟಿ ಆಗದಂತೆ ಮುಂಗಡ ಮೇವು ಸಂಗ್ರಹಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ನಗರಾಭಿವೃದ್ಧಿ ಇಲಾಖೆಯ ಯೋಜನಾ ನಿರ್ದೇಶಕಿ ಶಾಲಿನಿ, ಕೃಷಿ ಇಲಾಖೆ ಉಪ ನಿರ್ದೇಶಕರಾದ ಗಾಯತ್ರಿ, ಪಶುಸಂಗೋಪನೆ ಇಲಾಖೆಯ ಉಪನಿರ್ದೇಶಕರಾದ ಜಗದೀಶ್, ರೇಷ್ಮೆ ಇಲಾಖೆ ಉಪ ನಿರ್ದೇಶಕರಾದ ಪ್ರಭಾಕರ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.