ನವದೆಹಲಿ: ರಾಷ್ಟç ರಾಜಧಾನಿ ದೆಹಲಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಮಾಡಿದೆ. ದೆಹಲಿಯ ಕ್ರೆöÊಂ ಬ್ರಾಂಚ್ ಪೊಲೀಸರು ಇಬ್ಬರು ಶೂಟರ್ಗಳಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ.
ದೆಹಲಿಯ ದ್ವಾರಕಾದ ಆಯಾ ನಗರ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆದಿದೆ. ಬಂಧಿತರಲ್ಲಿ ಒಬ್ಬ ಆರೋಪಿ ಯಾದ್ ರಾಮ್ (೫೦) ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದಾದ್ಯಂತ ಕೊಲೆ ಯತ್ನ ಮತ್ತು ದರೋಡೆ ಸೇರಿದಂತೆ ಸುಮಾರು ೨೪ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಎಂದು ತಿಳಿದುಬಂದಿದೆ.
ಬಂಧಿತರು ಶೂಟೌಟ್ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದರು. ಅವರನ್ನು ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಇಬ್ಬರೂ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ್ದು, ಪೊಲೀಸರು ಪ್ರತಿದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರು ಆರೋಪಿಗಳ ಕಾಲುಗಳಿಗೆ ಗುಂಡೇಟಿನ ಗಾಯಗಳಾಗಿವೆ. ಈ ಎನ್ಕೌಂಟರ್ನಲ್ಲಿ ೬೯ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಧಿತ ಆರೋಪಿಗಳು ಬೇರೆ ಬೇರೆ ರಾಜ್ಯಗಳಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ಇವರ ತಲೆಗೆ ೧ ಲಕ್ಷ ರೂ. ಬಹುಮಾನ ಘೋಷಿಸಲಾಗಿತ್ತು. ಆರೋಪಿಗಳನ್ನು ಬಂಧಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರು ಶೂಟರ್ಗಳಿಗೆ ಗುಂಡೇಟು



