ಬೆಂಗಳೂರು: ಸಿದ್ದರಾಮಯ್ಯ ರಾಷ್ಟç ರಾಜಕಾರಣ ಪ್ರವೇಶಿಸಲು ನಿರಾಕರಿಸಿದ ನಂತರ ಅವರ ಪತ್ನಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯಸಭಾ ಸ್ಥಾನದ ಆಫರ್ ನೀಡಿದ್ದರು ಎಂಬ ಅಚ್ಚರಿಯ ವಿಚಾರ ಈಗ ತಿಳಿದುಬಂದಿದೆ.
ರಾಷ್ಟ್ರ ರಾಜಕಾರಣಕ್ಕೆ ಆಗಮಿಸುವಂತೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿ ತೀವ್ರ ಒತ್ತಡ ಹೇರಿದ್ದರು. ಒಂದು ವೇಳೆ ಸಿದ್ದರಾಮಯ್ಯಗೆ ದೆಹಲಿ ರಾಜಕಾರಣಕ್ಕೆ ಬರಲು ಸಾಧ್ಯವಾಗದಿದ್ದರೆ, ಅವರ ಪತ್ನಿಯನ್ನು ರಾಜ್ಯಸಭೆಗೆ ಕಳುಹಿಸಿಕೊಡುವಂತೆ ಗೌರವಯುತ ಆಫರ್ ನೀಡಿದ್ದರು. ಆದರೆ, ಇದನ್ನು ನಯವಾಗಿಯೇ ನಿರಾಕರಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, `ನಾನು ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ. ನನ್ನ ಪತ್ನಿ ಎಂದಿಗೂ ರಾಜಕೀಯದಲ್ಲಿ ಇಲ್ಲ, ಆಕೆ ಹೊರಜಗತ್ತಿಗೂ ಬಂದಿಲ್ಲ. ಹೀಗಾಗಿ ಆಕೆ ರಾಜ್ಯಸಭೆ ಪ್ರವೇಶಿಸುವ ಪ್ರಶ್ನೆಯೇ ಇಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ತಮಗೆ ನೀಡಿದ್ದ ಆ ಸ್ಥಾನವನ್ನು ಹಿಂದುಳಿದ ಸಮುದಾಯದ ಯೋಗ್ಯ ನಾಯಕರಿಗೆ ನೀಡುವಂತೆ ರಾಹುಲ್ ಗಾಂಧಿ ಬಳಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ. ಜೊತೆಗೆ ಪುತ್ರ ಯತೀಂದ್ರಗೆ ಡಿಸಿಎಂ ಪಟ್ಟವನ್ನು ಸಿದ್ದರಾಮಯ್ಯ ನಿರಾಕರಿಸಿದ್ದಾರೆ.
ಪತ್ನಿಗೆ ರಾಜ್ಯಸಭಾ ಸ್ಥಾನ ನಿರಾಕರಿಸಿದ ಸಿದ್ದರಾಮಯ್ಯ



