ಬೆಂಗಳೂರು: 15 ಬಾರಿ ಬಜೆಟ್ ಮಂಡಿಸಿ 1.5 ಲಕ್ಷ ಕೋಟಿ ಸಾಲ ಮಾಡಿರುವ ದಾಖಲೆ ಸೃಷ್ಟಿಸಿರುವ ಸಿದ್ದರಾಮಯ್ಯ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಸುಳ್ಳಿನ ಕಂತೆಯ ಬಜೆಟ್ ಮಂಡಿಸಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಬಜೆಟ್ ಮೇಲೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಸರ್ಕಾರವನ್ನು ವಿರೋಧಿಸಲು ಬಜೆಟನ್ನು ಬಳಸಿಕೊಂಡಿದ್ದಾರೆ.
ಬಜೆಟ್ ನ ಪಾವಿತ್ರ್ಯತೆಯನ್ನು ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಕೇಂದ್ರ ಸರ್ಕಾರದ ಅನುದಾನ ಪಡೆಯಲು ಅನೇಕ ವೇದಿಕೆಗಳಿವೆ. ಜಿಎಸ್ ಟಿ ಕೌನ್ಸಿಲ್ ಇದೆ. ನೀತಿ ಆಯೋಗ ಇದೆ. ಆ ಸಂದರ್ಭದಲ್ಲಿ ಮಾತನಾಡದೇ ಬಜೆಟ್ ನಲ್ಲಿ ಕೇಂದ್ರ ಸರ್ಕಾರವನ್ನು ವಿರೋಧಿಸುತ್ತಿರುವುದು ರಾಜಕೀಯ ಕಾರಣಕ್ಕೆ. ರಾಜಕೀಯಕ್ಕಾಗಿ ಬಜೆಟ್ ಬಳಸಿಕೊಂಡಿರುವುದು ಖಂಡನೀಯ ಎಂದು ಹೇಳಿದರು.
ಕಳೆದ ವರ್ಷಕ್ಕಿಂತ ಸುಮಾರು 25 ಸಾವಿರಕೋಟಿರೂ. ಸಾಲ ಮಾಡಿ ಅದರಲ್ಲಿ ಅಭಿವೃದ್ಧಿ ಗೆ ಕೇವಲ ಒಂದು ಸಾವಿರ ಕೋಟಿ ಮಾತ್ರ ಬಳಕೆ ಮಾಡಿಕೊಳ್ಳುವುದಾಗಿ ಹೇಳಿದ್ದಾರೆ. ಕಳೆದ ವರ್ಷ ಬಂಡವಾಳ ವೆಚ್ಚ 54 ಸಾವಿರ ಕೋಟಿಇತ್ತು ಈ ವರ್ಷ ಕೇವಲ 55 ಸಾವಿರ ಕೋಟಿಗೆಹೆಚ್ಚಳ ಮಾಡಿದ್ದಾರೆ.
ಯಾವುದೇ ಪ್ರಯೋಜನ ಇಲ್ಲದ ಕಾರ್ಯಗಳಿಗೆ ಬಜೆಟ್ ಹಣ ವೆಚ್ಚ ಮಾಡುತ್ತಿದ್ದಾರೆ. ರಾಜ್ಯದ ಹಣಕಾಸು ಸ್ಥಿತಿಹದಗೆಟ್ಟಿರುವುದು ಈ ಬಜೆಟ್ ನಲ್ಲಿ ಸ್ಪಷ್ಟವಾಗಿದೆ ಎಂದು ವಾಗ್ದಾಳಿ ನಡೆಸಿದರು.ಕೇಂದ್ರ ಸರ್ಕಾರದಿಂದ ಬರುವ ಅನುದಾನ ಸಂಪೂರ್ಣ ಬಂದಿದೆ. ಇವರ ತೆರಿಗೆ ಸಂಗ್ರಹದಲ್ಲಿ ಕೊರತೆಯಾಗಿದೆ.ಅದನ್ಮು ಮುಚ್ಚಿಡಲು ಸುಳ್ಳಿನ ಕಂತೆಯ ಬಜೆಟ್ ಮಂಡನೆ ಮಾಡಿದ್ದಾರೆ.
ಎಸ್ಸಿಪಿ ಟಿಎಸ್ಬಿಗೆ ಹಣ ನೀಡಿಲ್ಲ, ಶಿಕ್ಷಣಕ್ಕೆಣ ನೀರಾವರಿಗೆ ಹಣ ಇಟ್ಟಿಲ್ಲ. ರಾಜ್ಯವನ್ನು ದಿವಾಳಿ ಮಾಡಿದ್ದಾರೆ ಎಂದು ಅರೋಪಿಸಿದರು.
ಚುನಾವಣೆಗೋಷ್ಕರ ಕೇಂದ್ರ ಸರ್ಕಾರದ ವಿರುದ್ದ ಅಸರೋಪ ಮಾಡುತ್ತಿದ್ದಾರೆ. ಎಸ್ಸಿ ಎಸ್ಟಿಗಳಿಗೆ ಮೋಸದ ಬಜೆಟ್, ವಿದ್ಯಾರ್ಥಿಗಳಿಗೆ, ರೈತರಿಗೆ, ಮಹಿಳೆಯರಿಗೆ ಶೂನ್ಯ ಬಜೆಟ್ ಆಗಿದೆ. ರಾಜ್ಯದ ಇತಿಹಾಸದಲ್ಲಿ ಪ್ರತಿಪಕ್ಷ ಸಭಾತ್ಯಾಗ ಮಾಡುವ ಪರಿಸ್ಥಿತಿಗೆ ರಾಜ್ಯ ಸರ್ಕಾರ ಬಂದಿದೆ. ಸರ್ಕಾರದ ಈ ಜನವಿರೋಧಿ ನೀತಿಯನ್ನು ಜನರಿಗೆ ತಲುಪಿಸುತ್ತೇವೆ ಎಂದು ಹೇಳಿದರು.