ಚಿಕ್ಕಬಳ್ಳಾಪುರ: ತಾವು ಸಚಿವರಾಗಬೇಕೇ ಬೇಡವೇ ಎಂಬುದನ್ನು ನಿರ್ಧರಿಸುವುದು ರಾಜ್ಯದ ಜನತೆ ಮತ್ತು ನಮ್ಮ ಪಕ್ಷದ ಸರ್ಕಾರವೇ ಹೊರತು ಸಿದ್ದರಾಮಯ್ಯ ಅಲ್ಲ, ತಮ್ಮ ಅರ್ಹತೆ ಬಗ್ಗೆ ಸಿದ್ದರಾಮಯ್ಯನವರ ಪ್ರಮಾಣ ಪತ್ರ ಅಗತ್ಯವಿಲ್ಲ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದರು.
ಚಿತ್ರಾವತಿ ಸುಬ್ರಹ್ಮಣ್ಯೇಶ್ವರ ಜಾತ್ರೆಗೆ ಶುಕ್ರವಾರ ಚಾಲನೆ ನೀಡಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಹೇಳಿದ ಕಾರಣಕ್ಕೆ ತಮ್ಮನ್ನು ಸಚಿವರನ್ನಾಗಿ ಮಾಡಿಲ್ಲ, ನಮ್ಮ ಪಕ್ಷದ ಸರ್ಕಾರ, ನಮ್ಮ ಮುಖ್ಯಮಂತ್ರಿ ಮತ್ತು ಈ ರಾಜ್ಯದ ಜನತೆ ತಮ್ಮನ್ನು ಸಚಿವರನ್ನಾಗಿ ಮಾಡಿದ್ದಾರೆ.
ಜನತಾದಳದಲ್ಲಿದ್ದಾಗ ಯಾಕೆ ಇವರನ್ನು ಮುಖ್ಯಮಂತ್ರಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.ಬಾಯಿ ಚಪಲಕ್ಕೆ ಮಾತನಾಡುವುದು ಸರಿ
ಯಲ್ಲ, ಬೀದರ್ ನಿಂದ ಕೆಜಿಎಫ್ ವರೆಗೂ ತಮ್ಮಖಾತೆ ನಿರ್ವಹಣೆ ಬಗ್ಗೆ ಜನರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ. ತಾವು ಸಚಿವ ಸ್ಥಾನಕ್ಕೆ ಲಾಯಕ್ಕಾ?ಅಲ್ಲವಾ ಎಂಬುದನ್ನು ಜನರು ನಿರ್ಧಾರ ಮಾಡುತ್ತಾರೆ. ಅವರ ಸರ್ಟಿಫಿಕೆಟ್ ಬೇಕಾಗಿಲ್ಲ ಎಂದು ಖಾರವಾಗಿಯೇ ಉತ್ತರಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧಬಿಜೆಪಿ ಶಾಸಕರು ಹೈಕಮಾಂಡ್‍ಗೆ ಪತ್ರ ಬರೆದಿದ್ದಾರೆ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಕಾಂಗ್ರೆಸ್‍ನವರ ಕಾಲ್ಪನಿಕ ಕನಸು ಕಂಡಿರಬೇಕು ಎಂದು ಲೇವಡಿ ಮಾಡಿದರು. ಕಾಂಗ್ರೆಸ್ ನಲ್ಲಿ ಇಬ್ಬರು ನಾಯಕರಿದ್ದಾರೆ, ಕೆಲವರು ಡಿ.ಕೆ. ಶಿವಕುಮಾರ್ ಅವರನ್ನು ಬಯಸುತ್ತಿದ್ದರೆ, ಮತ್ತೆ ಕೆಲವರು ಸಿದ್ದರಾಮಯ್ಯ ಪರ ಇದ್ದಾರೆ. ಈಗ ಮೂರನೇಯವರೂ ಹುಟ್ಟಿಕೊಂಡಿದ್ದು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಯಾಕೆ ಮುಖ್ಯಮಂತ್ರಿ ಮಾಡಬಾರದು ಎಂದು ಮತ್ತೊಂದು ಗುಂಪು ಪ್ರಶ್ನಿಸುತ್ತಿದ್ದಾರೆ ಎಂದರು.
ಅಲ್ಲದೆ 2013ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಹಿರಿಯ ನಾಯಕ ಪರಮೇಶ್ವರ್ ಅವರನ್ನು ಯಾಕೆ ಮೂಲೆಗುಂಪು ಮನಾಡಿ
ದರು ಎಂಬ ಬಗ್ಗೆಯೂ ಪ್ರಶ್ನೆಗಳಿದ್ದು, ದಲಿತ ಮುಖ್ಯಮಂತ್ರಿಯಾಗಬೇಕು ಎಂಬ ಕೂಗು ಮೊದಲಿನಿಂದಲೂ ಇದೆ. ದಲಿತರ ಮತ ಪಡೆಯು
ತ್ತಾರೆ, ಅವರಿಗೆ ನ್ಯಾಯ ಒದಗಿಸಿಲ್ಲ ಎಂಬ ಆರೋಪಗಳೂ ಇವೆ ಎಂದು ಹೇಳಿದರು.
ಕಾಂಗ್ರೆಸ್ ನವರು ಸತತವಾಗಿ ತಮ್ಮ ವಿರುದ್ಧ ಆರೋಪ ಮಾಡುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ತಾವು ರಾಜಕೀಯವಾಗಿ ಬೆಳೆಯುತ್ತಿರುವ ಕಾರಣ ತಮ್ಮ ಬಗ್ಗೆ ಅವರಿಗೆ ಭಯ ಇದೆ, ಈ ಭಾಗದಲ್ಲಿ ಏನಾಗುತ್ತಿದೆ ಎಂಬುದನ್ನು ಅರ್ಥ ಮಾಡಿಕೊಂಡಿದ್ದಾರೆ ಹಾಗಾಗಿ ಅವರು ಸತತ ಸುದ್ದಿಗೋಷ್ಠಿಗಳ ಮೂಲಕ ತಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದರು.
Leave a Review