ಯಾದಗಿರಿ: ಬಸ್ ಹಾಗೂ ಕಾರು ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಆರು ಜನ ಸಜೀವ ದಹನಗೊಂಡಿರುವ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಬಳಿ ಸಂಭವಿಸಿದೆ.
ಬೆಂಗಳೂರಿನಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಾಗೂ ರಾಯಚೂರು ಕಡೆಗೆ ಹೋಗುತ್ತಿದ್ದ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಡಿಕ್ಕಿ ರಭಸಕ್ಕೆ ಕಾರು ಹೊತ್ತಿ ಉರಿದಿದೆ. ಅಗ್ನಿಶಾಮಕ ದಳದವರು ಸ್ಥಳಕ್ಕೆ ಬಂದು ಬೆಂಕಿಯನ್ನು ನಂದಿಸಿದ್ದಾರೆ. ಈ ಘಟನೆಯಲ್ಲಿದ್ದ ಆರು ಮಂದಿಯೂ ಸಜೀವ ದಹನಗೊಂಡಿದ್ದಾರೆ.
ಯಾದಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಬಸ್ – ಕಾರು ಡಿಕ್ಕಿ ಆರು ಜನ ಸಜೀವ ದಹನ



