ಬೆಂಗಳೂರು: ಭಾನುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಮಹಿಳಾ ತಂಡ ಭರ್ಜರಿ 143 ರನ್ ಜಯ ಸಾಧಿಸಿ ಸರಣಿಯಲ್ಲಿ ಶುಭಾರಂಭ ಮಾಡಿದೆ. ಈ ಪಂದ್ಯದಲ್ಲಿ ಸೊಗಸಾದ ಬ್ಯಾಟಿಂಗ್ ನಡೆಸಿ ಶತಕ ಬಾರಿಸಿದ ಎಡಗೈ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಅಂತಾರಾಷ್ಟ್ರೀಯ ಕ್ರಿಕೆಟ್ನ ಎಲ್ಲಾ ಸ್ವರೂಪದಲ್ಲಿ ಸೇರಿ 7 ಸಾವಿರ ರನ್ಗಳನ್ನು ಪೂರ್ಣಗೊಳಿಸಿದ ದಾಖಲೆ ಬರೆದಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ 56 ರನ್ಗಳನ್ನು ಕಲೆ ಹಾಕುತ್ತಿದ್ದಂತೆ ಸ್ಮೃತಿ ಮಂಧಾನ ಮಹಿಳಾ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 7 ಸಾವಿರ ರನ್ಗಳನ್ನು ಪೂರ್ತಿಗೊಳಿಸಿದ ಮೈಲುಗಲ್ಲು ನಿರ್ಮಿಸಿದರು. ಈ ಸಾಧನೆ ಮಾಡಿದ ಎರಡನೇ ಭಾರತೀಯ ಆಟಗಾತಿಘ ಎನ್ನುವ ಹಿರಿಗೆಮೆ ಪಾತ್ರರಾದರು. ದಾಖಲೆ ಮಾಜಿ ಆಟಗಾರ್ತಿ ಮಿಥಾಲಿ ರಾಜ್ ಹೆಸರಿನಲ್ಲಿದೆ. ಮಿಥಾಲಿ ರಾಜ್ ಅವರು 10868 ರನ್ಗಳನ್ನು ಬಾರಿಸಿದ್ದಾರೆ. 7,059 ರನ್ ಪೂರ್ತಿಗೊಳಿಸಿದ ಮಂಧಾನಗೆ ಬಿಸಿಸಿಐ ಶುಭ ಹಾರೈಸಿದೆ.