ಹೊಸಕೋಟೆ: ಧಾರ್ಮಿಕ ಆಚರಣೆಗಳು ಸಾಮಾಜಿಕ ಸ್ವಸ್ಥತೆ ಕಾಪಾಡಿಕೊಳ್ಳಲು ಸಹಕಾರಿಯಾಗಿವೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು. ಅವರು ತಾಲೂಕಿನ ಅನುಗೊಂಡನಹಳ್ಳಿ ಹೋಬಳಿ ಕಲ್ಕುಂಟೆ ಅಗ್ರಹಾರದ ಶ್ರೀ ರಂಗನಾಥಸ್ವಾಮಿ ದೇವಾಲಯದಲ್ಲಿ ಬ್ರಹ್ಮರಥೋತ್ಸವದ ಅಂಗವಾಗಿ ಏರ್ಪಡಿಸಿದ್ದ ವಿಶೇಷ ಪೂಜಾ ಕಾರ್ಯಗಳಲ್ಲಿ ಭಾಗವಹಿಸಿ ಮಾತನಾಡಿದರು.
ದೇವಾಲಯವು ಐತಿಹಾಸಿಕ ಹಿನ್ನೆಲೆಯುಳ್ಳದ್ದಾಗಿದ್ದು ಅಭಿವೃದ್ಧಿಗಾಗಿ ತಮ್ಮ ಅನುದಾನದಲ್ಲಿ ಹಣ ನೀಡಲಾಗಿದೆ. ಗ್ರಾಮಗಳಲ್ಲಿ ಶಾಂತಿ, ನೆಮ್ಮದಿ ಹೊಂದಲು ದೇವಾಲಯಗಳು ಪ್ರಶಸ್ತವಾದ ತಾಣಗಳಾಗಿವೆ. ಬ್ರಹ್ಮರಥೋತ್ಸವವನ್ನು ನೂರಾರು ವರ್ಷಗಳಿಂದ ಶ್ರದ್ಧೆ, ಭಕ್ತಿಯಿಂದ ನೆರವೇರಿಸಲಾಗುತ್ತಿದ್ದು ಸುತ್ತಮುತ್ತಲಿನ ಗ್ರಾಮಗಳ ಸಹಸ್ರಾರು ಭಕ್ತಾಧಿಗಳು ಭೇಟಿ ನೀಡುತ್ತಿದ್ದಾರೆ.
ಇಂತಹ ಆಚರಣೆಗಳು ಕಲೆ, ಸಂಸ್ಕøತಿ, ಧಾರ್ಮಿಕ ಆಚರಣೆಗಳನ್ನು ಉಳಿಸಿ ಬೆಳೆಸುವಲ್ಲಿ ಜಾಗೃತಿ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಗ್ರಾಮದಲ್ಲಿನ ರಂಗನಾಥಸ್ವಾಮಿ ಪ್ರೌಢಶಾಲೆ ಸಹ ಉತ್ತಮ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ಖ್ಯಾತಿ ಗಳಿಸಿದ್ದು ಬಹಳಷ್ಟು ವಿದ್ಯಾರ್ಥಿಗಳು ವಿದೇಶದಲ್ಲಿ ಉದ್ಯೋಗ ಪಡೆದುಕೊಂಡಿದ್ದಾರೆ. ಶಾಲೆಗೆ ಮಾಜಿ ರಾಷ್ಟ್ರಪತಿ ದಿವಂಗತ ಅಬ್ದುಲ್ ಕಲಾಂ ಸಹ ಭೇಟಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ ಎಂದರು. ಗ್ರಾಮ ಪಂಚಾಯಿತಿ ಸದಸ್ಯರು, ದೇವಾಲಯ ಸಮಿತಿಯ ಪದಾಧಿಕಾರಿಗಳು ಭಾಗವಹಿಸಿದ್ದರು.
Leave a Review