ದೆಹಲಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕೇಂದ್ರ ರಾಜ್ಯ ರೈಲ್ವೇ ಸಚಿವ ವಿ. ಸೋಮಣ್ಣ ಅವರನ್ನು ಮಾಜಿ ಸಚಿವ ಹಾಗೂ ಶಾಸಕ ಕಾಂಗ್ರೆಸ್ನ ಕೆ.ಎನ್. ರಾಜಣ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಎಡೆಮಾಡಿದೆ.
ದೆಹಲಿ ಪ್ರವಾಸದಲ್ಲಿರುವ ಕೆ.ಎನ್. ರಾಜಣ್ಣ ನಿನ್ನೆ ದೆಹಲಿಯ ಸಫ್ದರ್ಜಂಗ್ ರಸ್ತೆಯಲ್ಲಿರುವ ರಾಜ್ಯ ರೈಲ್ವೇ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಕೆಲ ಹೊತ್ತಿನಕಾಲ ಮಾತುಕತೆ ನಡೆಸಿದ್ದಾರೆ.
ತುಮಕೂರು ಜಿಲ್ಲೆಯ ರೈಲ್ವೇ ಯೋಜನೆಗಳ ಬಗ್ಗೆ ತಾವು ಮಾತುಕತೆ ನಡೆಸಿರುವುದಾಗಿ ರಾಜಣ್ಣ ಹೇಳಿದ್ದಾರೆ.
ಈಗಾಗಲೇ ರಾಜಣ್ಣ ಮತ್ತು ಬಿಡಬ್ಲೂö್ಯಡಿ ಸಚಿವ ಸತೀಶ್ಜಾರಕಿಹೊಳಿ ಅವರು ದೆಹಲಿ ಪ್ರವಾಸದಲ್ಲಿದ್ದು, ರಾಜಣ್ಣ ಮಾತ್ರ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿದ್ದಾರೆ.
ತುಮಕೂರು ಜಿಲ್ಲೆಯ ರೈಲ್ವೇ ಯೋಜನೆಗಳ ಬಗ್ಗೆ ತಾವು ಮಾತುಕತೆ ನಡೆಸಿರುವುದಾಗಿ ರಾಜಣ್ಣ ಹೇಳಿದ್ದರಾದರೂ ಇಬ್ಬರ ಮಾತುಕತೆ ಕರ್ನಾಟಕದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪಕ್ಷದ ಬೆಳವಣಿಗೆಯ ಹಿನ್ನೆಲೆಯಲ್ಲಿ ಭಾರೀ ಮಹತ್ವ ಪಡೆದುಕೊಂಡಿದೆ.
ಕಳೆದ ಮರ್ನಾಲ್ಕು ದಿನಗಳ ಹಿಂದಷ್ಟೇ ಕೇಂದ್ರ ಸಚಿವ ವಿ. ಸೋಮಣ್ಣ ಅವರು ಬೆಂಗಳೂರಿನಲ್ಲಿ ತಾವು ರಾಜ್ಯಕ್ಕೆ ತಂದ ರೈಲುಯೋಜನೆಗಳ ಬಗ್ಗೆ ಮಾಹಿತಿ ನೀಡಿ ಈ ಸಂದರ್ಭದಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ತಾವು ರಾಜ್ಯ ರಾಜಕೀಯಕ್ಕೆ ಮರಳುವಬಗ್ಗೆ ಯೋಚನೆಯಿಲ್ಲ ಎಂದು ತಿಳಿಸಿದ್ದರು. ರಾಜಣ್ಣ ಅವರು ತಮ್ಮ ರಾಜಕೀಯ ಜೀವನದಲ್ಲಿ ಹಲವು ಭಾರಿ ತಮ್ಮದೇ ಆದ ದಾಟಿಯಲ್ಲಿ ಹೇಳಿಕೆಗಳನ್ನು ನೀಡುವ ಮೂಲಕ ರಾಜಕೀಯ ವಲಯದಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿದ್ದರೂ ಈ ಹಿಂದೆ ಬಿಜೆಪಿಯ ಬಿಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಂದರ್ಭದಲ್ಲಿ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರತ್ಯಕ್ಷರಾಗಿ ಎಲ್ಲರ ಗಮನ ಸೆಳೆದಿದ್ದರು. ಅದಕ್ಕೂ ಮುನ್ನ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ಸೇರಿ ಜೆಡಿಎಸ್ ಪಕ್ಷದಿಂದ ತುಮಕೂರಿನ ಬೆಳ್ಳಾವಿ ಕ್ಷೇತ್ರದಿಂದ ಸ್ಪರ್ಧಿಸಿ ಶಾಸಕರಾಗಿ ಆಯ್ಕೆಯಾಗಿದ್ದರು. ಅದಕ್ಕು ಮುನ್ನ ಕಾಂಗ್ರೆಸ್ ಪಕ್ಷದ ವತಿಇಂದ ಟಿಕೆಟ್ ಸಿಗದ ಪರಿಣಾಮ ತುಮಕೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ವಿಧಾನಸಭೆಗೆ ಸ್ಪರ್ಧಿಸಿದ್ದರು.
ಬಿಜೆಪಿಯ ಸೊಗಡು ಶಿವಣ್ಣ ಪ್ರಪ್ರಥಮ ಬಾರಿಗೆ ತುಮಕೂರು ಕ್ಷೇತ್ರದಿಂದ ವಿಧಾನಸಭೆಯಾಗಿ ಆಯ್ಕೆಯಾಗಿದ್ದರು. ಇದಾದ ನಂತರ ಪುನಃ ಕಾಂಗ್ರೆಸ್ ಸೇರಿದ್ದ ರಾಜಣ್ಣ ವಿಧಾನಸಭೆಗೆ ೨೦೧೩ರಲ್ಲಿ ಕಾಂಗ್ರೆಸ್ನಿAದ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಒಂದು ಹಂತದಲ್ಲಿ ರಾಜಣ್ಣ ಅವರಿಗೆ ವಿಧಾನಪರಿಷತ್ ಟಿಕೆಟ್ ಸಿಗದ ಕಾರಣ ಪಕ್ಷೇತರರಾಗಿ ವಿಧಾನಪರಿಷತ್ ಚುನಾವಣೆಗೂ ಸ್ಪರ್ಧಿಸಿದ್ದರು. ಈ ಎಲ್ಲವನ್ನೂ ಗಮನಿಸಿದಾಗ ನಿನ್ನೆ ಕೇಂದ್ರ ಸಚಿವ ಸೋಮಣ್ಣ ಅವರನ್ನು ರಾಜಣ್ಣ ಮಾತನಾಡಿಸಿರುವುದು ನಾನಾ ಊಹಾಪೋಹಗಳಿಗೆ ಎಡೆಮಾಡಿಕೊಟ್ಟಿದೆ.
ಸೋಮಣ್ಣ-ರಾಜಣ್ಣ ಮಾತುಕತೆ, ಕುತೂಹಲ ಮೂಡಿಸಿದ ಕಾಂಗ್ರೆಸ್ ಶಾಸಕ-ಬಿಜೆಪಿ ಕೇಂದ್ರ ಸಚಿವರ ಚರ್ಚೆ



