ತುಮಕೂರು: ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸುವ ಸಲುವಾಗಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡಿ ಎಂದು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಮನವಿ ಮಾಡಿದರು.
ತಾಲ್ಲೂಕಿನ ಬೆಳ್ಳಾವಿಯಲ್ಲಿ ಹಮ್ಮಿಕೊಂಡಿದ್ದ ರೋಡ್ ಶೋನಲ್ಲಿ ಭಾಗವಹಿಸಿ ಮಾತನಾಡಿದರು.ರೈತರ ಖಾತೆಗಳಿಗೆ ಹಣ ಜಮಾ ಮಾಡುವ ಮೂಲಕ ಮೋದಿ ರೈತರ ಜೀವನಾಡಿಯಾಗಿದ್ದಾರೆ. ಉಚಿತವಾಗಿ ಗ್ಯಾಸ್ ಸಿಲಿಂಡರ್ ನೀಡಿ ಮಹಿಳೆಯರಿಗೆ ನೆರವಾಗಿದ್ದಾರೆ. ಆಸ್ಪತ್ರೆಗಳಲ್ಲಿ ಜನೌಷಧ ಕೇಂದ್ರ ಸ್ಥಾಪಿಸಿದ್ದಾರೆ. ಬಡವರ ಕಲ್ಯಾಣಕ್ಕಾಗಿ ಅನೇಕ ಯೋಜನೆಗಳನ್ನು ರೂಪಿಸಿದ್ದಾರೆ ಎಂದರು.
ಶಾಸಕ ಬಿ.ಸುರೇಶ್ಗೌಡ, ‘ನರೇಂದ್ರಮೋದಿ ಮತ್ತು ಕಾಂಗ್ರೆಸ್ನ ಗ್ಯಾರಂಟಿ ಮಧ್ಯೆ ನಡೆಯುತ್ತಿರುವ ಚುನಾವಣೆಯಾಗಿದೆ. ಸೋಮಣ್ಣ ಅವರಿಗೆ ಮತ ನೀಡಿದರೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಹಾಯಕವಾಗುತ್ತದೆ. ಮತದಾರರು ಯಾವುದೇ ಆಮಿಷಕ್ಕೆ ಬಲಿಯಾಗದೆ ತಮ್ಮ ಹಕ್ಕು ಚಲಾಯಿಸಬೇಕು’ ಎಂದು ಹೇಳಿದರು.ಮುಖಂಡರಾದ ಎಚ್.ನಿಂಗಪ್ಪ, ರಾಜಶೇಖರ್, ಕರಿಯಪ್ಪ, ನರಸಿಂಹಮೂರ್ತಿ, ದಿನೇಶ್ ಇತರರು ಹಾಜರಿದ್ದರು.