ಬೆಂಗಳೂರು: ಮಾಜಿ ಸಚಿವ ವಿ. ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದು, ದೊಡ್ಡ ಅಂತರದಿಂದ ಗೆಲ್ಲುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ನಾನು ಇಂದು ಸೋಮಣ್ಣ ನಾಮಪತ್ರ ಸಲ್ಲಿಸುವ ವೇಳೆ ಹಾಜರಿರಲು ಹೋಗುತ್ತಿದ್ದೇನೆ. ಅವರು ದೊಡ್ಡ ಅಂತರದಿಂದ ಗೆಲ್ಲುತ್ತಾರೆ. ಚುನಾವಣಾ ವೇಳೆ ಪ್ರಚಾರ ಮಾಡುವುದು ನಮ್ಮ ಕರ್ತವ್ಯ. ಕರ್ತವ್ಯ ಮಾಡುತ್ತೇವೆ ಎಂದಿದ್ದಾರೆ.
ಕೆ.ಎಸ್.ಈಶ್ವರಪ್ಪ ಅವರು ಇಂದು ದೆಹಲಿಗೆ ಹೋಗುತ್ತಿದ್ದಾರೆ. ಅವರು ಚುನಾವಣೆಗೆ ಸ್ಪರ್ಧಿಸುವುದರಿಂದ ಹಿಂದೆ ಸರಿಯುವ ಬಗ್ಗೆ ತಮಗೇನು ತಿಳಿಯದು ಎಂದು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.