ನವದೆಹಲಿ: ಜಂತರ್ ಮಂತರ್ನಲ್ಲಿ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ, ಕಾಕ್ರೋಚ್ ಜನತಾ ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ವಾಂಗ್ಚುಕ್ ಅವರು ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿರುವುದರಿಂದ ಹೈಕೋರ್ಟ್ ಆದೇಶಗಳಿಗೆ ಅನುಸಾರವಾಗಿ ಮತ್ತು ತಜ್ಞರ ವೈದ್ಯಕೀಯ ಸಲಹೆಯ ಮೇರೆಗೆ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಅವರನ್ನು ಅಗತ್ಯ ವೈದ್ಯಕೀಯ ಆರೈಕೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪೊಲೀಸ್ ತಿಳಿಸಿದ್ದಾರೆ. ಪ್ರತಿಭಟನಾಕಾರರು ಜಂತರ್ ಮಂತರ್ ಅನ್ನು ಶಾಂತಿಯುತವಾಗಿ ತೆರವುಗೊಳಿಸುವಂತೆ ಪೊಲೀಸರು ಮನವಿ ಮಾಡಿದ್ದಾರೆ.



