ದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಕಫದ ಸಮಸ್ಯೆಯಿಂದ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರ ಆರೋಗ್ಯ ಸ್ಥಿರವಾಗಿದ್ದು, ಹೃದ್ರೋಗ ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸೋನಿಯಾ ಗಾಂಧಿ ಅವರಿಗೆ ಕೆಲ ದಿನಗಳಿಂದ ಕೆಮ್ಮು ಮತ್ತು ಕಫದ ಸಮಸ್ಯೆಯಿದೆ. ದೆಹಲಿಯಲ್ಲಿ ಈಗ ತೀವ್ರ ವಾಯುಮಾಲಿನ್ಯವಿರುವುದರಿಂದ ಅವರು ತಪಾಸಣೆಗಾಗಿ ನಿಯಮಿತವಾಗಿ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.



