ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದು ಗುರುಗಾಂವ್ನ ಮೇದಾಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ನಿಯಮಿತ ತಪಾಸಣೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿ ಮಾಜಿ ಅಧ್ಯಕ್ಷೆ ಆಸ್ಪತ್ರೆಯಲ್ಲಿದ್ದಾರೆ ಮತ್ತು ಶೀಘ್ರದಲ್ಲೇ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ವರದಿ ಮಾಡಿದೆ.



