ಬೆಂಗಳೂರು: ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆ ಪ್ರಕರಣ ಇದೀಗ ತಿರುವು ಪಡೆದುಕೊಂಡಿದೆ.ಸೌಂದರ್ಯ ಜಗದೀಶ್ ಅವರ ವ್ಯವಹಾರಿಕ ಪಾಲುದಾರರ ಮೆಲೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವ್ಯವಹಾರಿಕ ಪಾಲುದಾರರಾದ ಸುರೇಶ್, ಹೊಂಬಣ್ಣ ಹಾಗೂ ಸುಧೀಂದ್ರ ಎಂಬುವವರ ಮೇಲೆ ಎಫ್ ಐ ಆರ್ ದಾಖಲಾಗಿದ್ದು, ವ್ಯವಹಾರದಲ್ಲಿ ಸೌಂದರ್ಯ ಜಗದೀಶ್ ಅವರಿಗೆ ಸುಮಾರ್ 60ಕೋಟಿ ರೂಪಾಯಿನಷ್ಟು ನಷ್ಟ ಸಂಭವಿಸಿರುವುದು ಅವರು ಬರೆದಿಟ್ಟಿದ್ದ ಡೆತ್ನೋಟ್ ನಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗಿದೆ.
ಸೌಂದರ್ಯ ಜಗದೀಶ್ ಮನೆಯಲ್ಲಿ ಕೆಲವೇ ಸಾಲುಗಳು ಬರೆದಿದ್ದ ಡೆತ್ ನೋಟ್ ಪತ್ತೆಯಾಗಿತ್ತು. ಅದರ ಆಧಾರದ ಮೇಲೆ ಈಗ ಎಫ್ ಐ ಆರ್ ದಾಖಲಿಸಲಾಗಿದೆ. ಇದರಲ್ಲಿ ಸೌಂದರ್ಯ ಕನ್ಸ್ಟ್ರಕ್ಷನ್ ಸಂಬಂಧ ಬ್ಯುಸಿನೆಸ್ ಲಾಸ್ ಬಗ್ಗೆ ಮಾಹಿತಿ ಇದೆ. ಪಾಲುದಾರರು ಕಾರಣ ಎಂದು ಉಲ್ಲೇಖಿಸಲಾಗಿದೆ.
ಈ ಡೆತ್ ನೋಟ್ ಅಧರಿಸಿ ಜಗದೀಶ್ ಪತ್ನಿ ಶಶಿರೇಖಾರವರು ನೀಡಿದ ದೂರಿನನ್ವಯ ಮಹಾಲಕ್ಷ್ಮಿಲೇಔಟ್ ಪೊಲೀಸ್ ಠಾಣೆಯಲ್ಲಿ ಮೂವರ ವಿರುದ್ಧ ದೂರು ದಾಖಲಾಗಿದೆ.