ಜೂನ್ 27 ಗುರುವಾರ, 2024ರ ಟಿ20 ವಿಶ್ವಕಪ್ನ ಮೊದಲ ಸೆಮಿಫೈನಲ್ನಲ್ಲಿ ಅಫ್ಘಾನಿಸ್ತಾನ ವಿರುದ್ಧ ದಕ್ಷಿಣ ಆಫ್ರಿಕಾ ತಂಡವು ಭರ್ಜರಿ ಗೆಲುವು ಸಾಧಿಸಿದೆ. ಈ ಗೆಲುವಿನೊಂದಿಗೆ ಟಿ20 ವಿಶ್ವಕಪ್ನಲ್ಲಿ ಇತಿಹಾಸ ಸೃಷ್ಟಸಿದೆ.
ಅಫ್ಘಾನಿಸ್ತಾನ ತಂಡವನ್ನು ಸೋಲಿಸಿದ ಹರಿಣಗಳ ಪಡೆ 2024ರ ಟಿ20 ವಿಶ್ವಕಪ್ ಫೈನಲ್ಗೆ ತನ್ನ ಟಿಕೆಟ್ ಕಾಯ್ದಿರಿಸಿದೆ.ದಕ್ಷಿಣ ಆಫ್ರಿಕಾ ತಂಡ ಯಾವುದೇ ಮಾದರಿಯ ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿರುವುದು ಇದೇ ಮೊದಲು.
ಅಫ್ಘಾನಿಸ್ತಾನ ನೀಡಿದ 57 ರನ್ಗಳ ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ಸುಲಭವಾಗಿ 9 ವಿಕೆಟ್ಗಳಿಂದ ಪಂದ್ಯವನ್ನು ಗೆದ್ದು ಬೀಗಿದೆ. ಅಫ್ಘಾನಿಸ್ತಾನ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು.