ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ಭಾನುವಾರ ವಿಶೇಷ ಪೂಜೆ, ಉತ್ಸವಾದಿಗಳು ಸಂಪ್ರದಾಯದಂತೆ ಜರುಗಿದವು.
ಭಾನುವಾರ ಮುಂಜಾನೆಯಿಂದಲೇ ಮಲೆ ಮಹದೇಶ್ವರ ಸ್ವಾಮಿ ಮರ್ತಿಗೆ ಎಳನೀರಿನ ಅಭಿಷೇಕ, ಹಾಲು, ಪಂಚಾ ಮೃತ ಅಭಿಷೇಕ ಪೂಜೆ ನೆರವೇರಿಸಲಾಯಿತು. ನೈವೇದ್ಯ ರ್ಪಿಸಿದ ಬಳಿಕ ಮಹಾ ಮಂಗಳಾರತಿ ಮಾಡಲಾಯಿತು.
ಅಮಾವಾಸ್ಯೆ ಪ್ರಯುಕ್ತ ಶ್ರೀ ಕ್ಷೇತ್ರಕ್ಕೆ ಸಾವಿರಾರು ಜನರು ಭೇಟಿ ನೀಡಿ ಮಹದೇಶ್ವರನ ರ್ಶನ ಪಡೆದರು. ಚಿನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸವ ವಾಹನ, ಹುಲಿ ವಾಹನ, ರುದ್ರಾಕ್ಷಿ ಮಂಟಪ ಸೇವೆಗಳನ್ನು ಮಾಡುವ ಮೂಲಕ ತಮ್ಮ ಹರಕೆಯನ್ನು ಸಲ್ಲಿಸಿದರು.
ರಾಜ್ಯ, ಹೊರರಾಜ್ಯಗಳಿಂದ ಸಾವಿರಾರು ಜನರು ಆಗಮಿಸಿ ದೇವರ ರ್ಶನ ಪಡೆದರು. ೬೦ ರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ರಾಜಗೋಪುರದ ಮುಖ್ಯ ದ್ವಾರದಲ್ಲಿ ನೇರರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ಆಗಮಿಸಿದ್ದ ಜನರಿಗೆ ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕುಡಿಯುವ ನೀರು, ದಾಸೋಹ, ನೆರಳಿನ ವ್ಯವಸ್ಥೆ ಕಲ್ಪಿಸಲಾಗಿತ್ತು.
ರ್ಭಗುಡಿ ಹಾಗೂ ದೇಗುಲದ ಒಳಾಂಗಣವನ್ನು ವಿವಿಧ ಪುಷ್ಪಗಳಿಂದ ವಿಶೇಷವಾಗಿ ಸಿಂಗರಿಸಲಾಗಿತ್ತು.
*ಸ್ವಾಮಿಗೆ ಎಣ್ಣೆ ಮಜ್ಜನ ಸೇವೆ* : ಶನಿವಾರ ಸಂಜೆ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನೆರವೇರಿಸಲಾಗಿತ್ತು.
ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಡಾ. ಶಾಂತಮಲ್ಲಿಕರ್ಜುನ ಸ್ವಾಮೀಜಿ ಅವರ ಸಮ್ಮುಖದಲ್ಲಿ ಬೇಡಗಂಪಣ ರ್ಚಕರು ಎಂದಿನಂತೆ ಮಾದಪ್ಪನಿಗೆ ಪೂಜೆ ನೆರವೇರಿಸಿದರು. ಬಳಿಕ ಭಕ್ತರ ದೇವರ ರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ಭಕ್ತರಿಗೆ ಪ್ರಸಾದ ವಿನಿಯೋಗಿಸಲಾ ಯಿತು. ಸಂಜೆ ೭ಕ್ಕೆ ಜರುಗಿದ ಚಿನ್ನದ ತೇರಿನ ಉತ್ಸವದಲ್ಲಿ ಭಾಗಿಯಾಗಿದ್ದರು. ಇದರಲ್ಲಿ ಹರಕೆ ಹೊತ್ತ ಭಕ್ತರು ದೇಗುಲದ ಸುತ್ತ ದಂಡಿನ ಕೋಲನ್ನು ಹೊತ್ತು ಪ್ರದಕ್ಷಿಣೆ ಹಾಕುವುದರ ಮೂಲಕ ಭಕ್ತಿಭಾವ ಮೆರೆದರು.
*ಉತ್ಸವಗಳಲ್ಲಿ ಭಾಗಿಯಾದ ಭಕ್ತರು:* ಮ.ಬೆಟ್ಟಕ್ಕೆ ಆಗಮಿಸಿದ ಭಕ್ತರು ಅಂತರಂಗೆಯ ಕಲ್ಯಾಣಿಯಲ್ಲಿಪುಣ್ಯಸ್ನಾನ ಮಾಡಿ ಮುಡಿಸೇವೆ, ಉರುಳುಸೇವೆ, ಪಂಜಿನ ಸೇವೆ ಹಾಗೂ ರಜಾ ಹೊಡೆಯುವ ಸೇವೆ ಕೈಗೊಂಡು ದೇವರ ರ್ಶನ ಪಡೆದು ಪೂಜೆ ಸಲ್ಲಿಸಿದರು. ಕೆಲ ಭಕ್ತರು ದೇಗುಲದ ಸುತ್ತ ಹುಲಿ, ಬಸವ ಹಾಗೂ ರುದ್ರಾಕ್ಷಿ ವಾಹನ ಉತ್ಸವಾದಿಗಳಲ್ಲಿ ಭಾಗಿಯಾಗಿದ್ದರು.
ಲಕ್ಷಾಂತರ ಭಕ್ತರು ಭೇಟಿ ನೀಡುವ ಹಿನ್ನೆಲೆಯಲ್ಲಿ ಶ್ರೀ ಮಲೆಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕರ್ಯರ್ಶಿ ಎ.ಇ.ರಘು ಅವರ ನೇತೃತ್ವದಲ್ಲಿ ಕುಡಿಯುವ ನೀರು, ಶೌಚಗೃಹ, ವಿಶೇಷ ನಿರಂತರ ದಾಸೋಹ, ನೆರಳಿನ ವ್ಯವಸ್ಥೆ ಹಾಗೂ ಇನ್ನಿತರ ಅಗತ್ಯ ಮೂಲ ಸೌರ್ಯವನ್ನು ಒದಗಿಸಲಾಗಿತ್ತು, ಅಂಗವಿಕಲರು, ಹಿರಿಯ ನಾಗರಿಕರಿಗೆ ದೇವರ ರ್ಶನ ಪಡೆಯಲು ವಿಶೇಷ ಕೌಂಟರ್ ಅವಕಾಶ ಕಲ್ಪಿಸಲಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು.