This is the title of the web page
This is the title of the web page

ಅಭಿವೃದ್ಧಿಯ ವೇಗ ಡಬಲ್ ಇಂಜಿನ್ ಸರ್ಕಾರದ ಬಗ್ಗೆ ಪ್ರಧಾನಿ ವಿವರ

ಬೀದರ್: ರಾಜ್ಯ ಹಾಗೂ ರಾಷ್ಟ್ರದಲ್ಲಿ ಡಬಲ್ ಇಂಜಿನ್ ಸರ್ಕಾರ ಇರುವುದರಿಂದ ಅಭಿವೃದ್ಧಿಯ ವೇಗ ಹೆಚ್ಚುತ್ತಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್‍ನ ಚನ್ನಕೇರಾ ಕ್ರಾಸ್ ಬಳಿ ಆಯೋಜಿಸಲಾಗಿದ್ದ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರ ಭಾಷಣದಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು, ಈ ಭಾರಿ ಕರ್ನಾಟಕವನ್ನು ನಂ1 ರಾಜ್ಯವನ್ನು ಮಾಡುವ ಚುನಾವಣೆ ಇದಾಗಿದೆ. ಬಿಜೆಪಿಯನ್ನು ಸ್ಪಷ್ಟ ಬಹುಮತದೊಂದಿಗೆ ಗೆಲ್ಲಿಸಬೇಕೆಂದು ಮನವಿ ಮಾಡಿದರು.

ರಾಜ್ಯ ಹಾಗೂ ರಾಷ್ಟ್ರದಲ್ಲಿ ಹಮ್ಮಿಕೊಳ್ಳಲಾಗಿರುವ ಜನಪರ ಯೋಜನೆಗಳನ್ನು ಮೋದಿಯವರು ವಿವರಿಸಿದರು. ಕಿಸಾನ್ ಸಮ್ಮನ್ ಯೋಜನೆಯಿಂದ ರೈತರಿಗೆ ಸಾಕಷ್ಟು ಲಾಭವಾಗಿದೆ. ಜಲಜೀವನ್ ಯೋಜನೆಯಿಂದ 40 ಲಕ್ಷ ಮನೆಗಳಿಗೆ ಕುಡಿಯುವ ನೀರಿನ ಸಂಪರ್ಕ ದೊರೆತಿದೆ. ಕೋಟ್ಯಂತರ ಜನರ ಬ್ಯಾಂಕ್ ಖಾತೆ ತೆರೆಯಲಾಗಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರ ಪಠಿಸಿದ ಪ್ರಧಾನಿಯವರು ಕಾಂಗ್ರೆಸ್ ಕೇವಲ ಸಮಾಜ ಒಡೆಯುವ ಕೆಲಸ ಆಡುತ್ತಿದೆ. ಜಾತಿ ಮತದ ಹೆಸರಿನಲ್ಲಿ ರಾಜಕೀಯ ಮಾಡಿದೆ.

ಷ್ಟಿಕರಣ ರಾಜಕೀಯ ಮಾಡಿದೆ ಎಂದು ಕಾಂಗ್ರೆಸ್ ವಿರುದ್ಧ ಗುಡುಗಿದರಲ್ಲದೇ ಕಾಂಗ್ರೆಸ್ ಜೆಡಿಎಸ್‍ನಿಂದ ಜನರ ಅಭಿವೃದ್ಧಿಗಾಗಿ ಯಾವುದೇ ಯೋಜನೆಗಳನ್ನು ಜಾರಿಗೊಳಿಸಲಾಗಿಲ್ಲ ಎಂದು ಆರೋಪಿಸಿದರು. ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಸಾಲಮನ್ನ ಹೆಸರಿನಲ್ಲಿ ಜನರಿಗೆ ಮೋಸ ಮಾಡಿದೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಹಣ ಜಮೆ ಮಾಡಿದ್ದಾರೆಂದು ದೂರಿದರು.

5 ವರ್ಷಗಳಲ್ಲಿ ಕರ್ನಾಟಕದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಡಬಲ್ ಇಂಜಿನ್ ಸರ್ಕಾರದಿಂದಾಗಿ ಇಷ್ಟು ಅಭಿವೃದ್ಧಿಯಾಗಿದೆ. 91 ಭಾರಿ ಕಾಂಗ್ರೆಸ್‍ನವರು ನನ್ನನ್ನು ಬೈದಿದ್ದಾರೆ. ಚುನಾವಣಾ ಸಮಯದಲ್ಲಿ ನನ್ನನ್ನು ಬೈಯ್ಯುತ್ತಿದ್ದಾರೆ. ಬೈಯ್ಯುವುದೇ ಅವರ ಕೆಲಸವಾಗಿದೆ. ಒಳ್ಳೆಯ ಕೆಲಸ ಮಾಡುವವರನ್ನು ಬೈಯ್ಯುವುದೇ ಅವರ ಚಾಳಿ. ಬೈದಗಾಲೆಲ್ಲಾ ಅವರಿಗೆ ಶಿಕ್ಷೆಯಾಗಿದೆ. ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೂ ಅವಮಾನ ಮಾಡಿದ್ದರು. ಲಿಂಗಾಯಿತರಿಗೂ ಸಹ ಭ್ರಷ್ಟರೆಂದು ಅವಮಾನಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದರು.

ಇದಕ್ಕೂ ಮುನ್ನ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ನರೇಂದ್ರ ಮೋದಿ ಅಂತಹ ವಿಶ್ವಜನಪ್ರಿಯ ನಾಯಕನಿಂದ ರಾಷ್ಟ್ರದಲ್ಲಿ ಅಭಿವೃದ್ಧಿ ಕೆಲಸಗಳಾಗುತ್ತಿವೆ. ಇಂತಹವರನ್ನು ವಿಪಕ್ಷಗಳವರು ಅವಮಾನ ಪಡಿಸುತ್ತಿದ್ದಾರೆ ಎಂದು ಹೇಳಿದರು.
ಸಮಾರಂಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಉಮೇಶ್ ಜಾದಾವ್, ಸಚಿವ ಪ್ರಭು ಚೌಹಾಣ್ ಮತ್ತಿತರರು ಹಾಜರಿದ್ದರು.