ವಿಜಯಪುರ: ನಡು ರಸ್ತೆಯಲ್ಲೇ ಉರುಳಿ ಬಿದ್ದ ಸ್ಪಿರಿಟ್ ತುಂಬಿದ ಟ್ಯಾಂಕರ್ ಧಗ ಧಗನೆ ಹೊತ್ತಿ ಉರಿದಿರುವ ಘಟನೆ ವಿಜಯಪುರದಲ್ಲಿ ನಡೆದಿದ್ದು, ಭಾರೀ ಅನಾಹುತ ತಪ್ಪಿದೆ.
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಹೊರಭಾಗದ ಕಲಬುರಗಿ ಬೈ ಪಾಸ್ ಬಳಿ ಚಾಲಕನ ನಿಯಂತ್ರಣ ತಪ್ಪಿದ್ದರಿಂದಾಗಿ ಟ್ಯಾಂಕರ್ ಉರುಳಿಬಿದ್ದಿದೆ. ರಸ್ತೆ ಪಕ್ಕದಲ್ಲಿ ಉರುಳಿ ಬೀಳುತ್ತಲೇ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಟ್ಯಾಂಕರ್ ಉರುಳಿ ಬೀಳುತ್ತಲೇ ಚಾಲಕ ಕ್ಲೀನರ್ ಎಸ್ಕೇಪ್ ಆಗಿದ್ದಾರೆ. ಬೆಂಕಿಯ ಕೆನ್ನಾಲಿಗೆ ನಂದಿಸಲು ಅಗ್ನಿ ಶಾಮಕ ದಳದ ಸಿಬ್ಬಂದಿಯ ಹರಸಾಹಸ ಪಟ್ಟಿದ್ದಾರೆ. ಸದ್ಯ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆ ಬಳಿಕ ರಸ್ತೆಯಲ್ಲೇ ನಿಂತಿದ್ದ ಸ್ಥಳೀಯರು ಈ ದೃಶ್ಯವನ್ನು ಮೊಬೈಲ್ನಲ್ಲಿ ವೀಡಿಯೋ ಮಾಡಿದ್ದಾರೆ.ಸಿಂದಗಿ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.