ಯಲಹಂಕ: ದಾಸನಪುರ ಹೋಬಳಿ ಮಾಚೋಹಳ್ಳಿ ಗ್ರಾಮದಲ್ಲಿ ಭಾನುವಾರ ನಡೆದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದೆ ಇಂತಹ ಪವಿತ್ರ ಭಾಷೆಯನ್ನು ಉಳಿಸುವ ಹಾಗೂ ಬೆಳೆಸುವ ಸಲುವಾಗಿ ಎಲ್ಲರೂ ಒಗ್ಗಟ್ಟಾಗಬೇಕಿದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.
ಮಾಚೋಹಳ್ಳಿ ಕಾಲೋನಿಯ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರಕಾಶ್ ಮತ್ತು ಸತೀಶ್ (ಶಶಿ ) ಸಾರಥ್ಯದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಅದ್ದೂರಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದ್ದು ಹಲವು ಸಾಂಸ್ಕೃತಿಕ ಕಾರ್ಯಕ್ರಮ, ರಂಗೋಲಿ ಸ್ಪರ್ಧೆ, ಅನ್ನದಾನ, ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.
ಈ ವರ್ಣ ರಂಜಿತ ಕಾರ್ಯಕ್ರಮದಲ್ಲಿ ಮಾಜಿ ಜಿಲ್ಲಾ ಪಂಚಾಯತಿ ಸದಸ್ಯರಾದ ಉದ್ದಂಡಯ್ಯ. ಮಾಚೋಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೇ ಸರಸ್ವತಮ್ಮ, ಮಾಜಿ ಅಧ್ಯಕ್ಷರಾದ ರಾಮಕೃಷ್ಣಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಶಶಿ, ಆನಂದ್, ಪ್ರಕಾಶ್, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು. ನೆಚ್ಚಿನ ಶಾಸಕರಿಗೆ ಬೆಳ್ಳಿ ಕಿರೀಟ ಉಡುಗೊರೆ. ಇದೇ ಸಂದರ್ಭದಲ್ಲಿ ತಮ್ಮ ಮೆಚ್ಚಿನ ಶಾಸಕ ಎಸ್ ಆರ್ ವಿಶ್ವನಾಥ್ ಅವರಿಗೆ ಬೆಳ್ಳಿ ಕಿರೀಟ ತೊಡಿಸಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸಿದರು.