ಚಳ್ಳಕೆರೆ: ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ರಘುಮೂರ್ತಿ ರವರು ಚಳ್ಳಕೆರೆ ನಗರದ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿ.
ವಿವೇಕಾನಂದ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮದ ಉದ್ದೇಶ ಏನೆಂದರೆ ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಹಾಗೂ ಅವರಲ್ಲಿರುವಂತಹ ಕಲೆ ಮತ್ತು ಕ್ರೀಡೆಯನ್ನು ಶಿಕ್ಷಕರು ಗುರುತಿಸಿ ಅವರಿಗೆ ಒಂದು ವೇದಿಕೆಯನ್ನು ಕೊಟ್ಟು. ಪ್ರೋತ್ಸಾಹಿಸಿದಾಗ. ಮಕ್ಕಳಲ್ಲಿ ಇರುವ ಪ್ರತಿಭೆಯು ಹೊರಹೊಮ್ಮುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಯ ಪ್ರತಿಭೆ ಗುರುತಿಸುವಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ ಎಂದರು.
ಚಳ್ಳಕೆರೆ ನಗರದ ಶ್ರೀ ಸ್ವಾಮಿ ವಿವೇಕಾನಂದ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ 2023-24ನೆ ಸಾಲಿನ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಶಾಸಕರು ಮಾತನಾಡಿದರು.
ಈ ಸಂದರ್ಭದಲ್ಲಿ ತಾಲೂಕು ಕ್ಷೇತ್ರ ಶಿಕ್ಷಣಾಧಿ ಕಾರಿ ಸುರೇಶ್, ನಗರಸಭೆ ಸದಸ್ಯರಾದ ಶ್ರೀಮತಿ ಸುಜಾತ ಪ್ರಹ್ಲಾದ್, ಶ್ರೀಮತಿ ಕವಿತಾ ಬೋರಯ್ಯ,ರಾಘವೇಂದ್ರ, ಮತ್ತು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಲಿಂಗೇಗೌಡ, ಸಿ.ಟಿ.ವಿರೇಶ್ ಹಾಗೂ ಶಾಲಾ ಆಡಳಿತ ಮಂಡಳಿ ಮುಖ್ಯಸ್ಥರಾದ ಶ್ರೀಮತಿ ಪ್ರಮೀಳಮ್ಮ, ಹಾಗೂ ಶಾಲೆಯ ಶಿಕ್ಷಕರು, ವಿದ್ಯಾರ್ಥಿ,ವಿದ್ಯಾರ್ಥಿ ನೀಯರು ಮತ್ತು ಶಾಲಾ ಸಿಬ್ಬಂದಿ ಉಪಸ್ಥತರಿದ್ದರು.