ಕನಕಪುರ: ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಹಾಗೂ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಕಲ್ಲಹಳ್ಳಿಯ ಶ್ರೀ ವೆಂಕಟ ರಮಣಸ್ವಾಮಿ ಬ್ರಹ್ಮ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವ ಅಪಾರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.
ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ನೆಲಸಿರುವ ಅತೀ ಪುರಾತನ ಕಾಲದ ಶ್ರೀ ವೆಂಕಟರಮಣಸ್ವಾಮಿ ದೇವರಿಗೆ ದೇವಾಲಯದ ಪ್ರಧಾನ ಅರ್ಚಕ ಸುದರ್ಶನ್ ನೇತೃತ್ವ ದಲ್ಲಿ ಬೆಳಿಗ್ಗೆ ಬ್ರಾಹ್ಮೀ ಮಹೂರ್ತದಲ್ಲಿ ದೇವರ ವಿಗ್ರಹಕ್ಕೆ ಅಭಿಷೇಕ, ಅರ್ಚನೆ ನೇರವೇರಿಸಿ ದೇವಾಲಯದ ಪ್ರಾಂಗಣದ ಸುತ್ತಲೂ ದೇವರ ಉತ್ಸವಮೂರ್ತಿಯನ್ನು ಮೆರವಣಿಗೆ ನಡೆಸಲಾಯಿತು,
ಮಧ್ಯಾಹ್ನ ಒಂದು ಗಂಟೆ ವೇಳೆಗೆ ವಿವಿಧ ಹೂವುಗಳಿಂದ ಭವ್ಯವಾಗಿ ಅಲಂಕೃತಗೊಂಡಿದ್ದ ರಥಕ್ಕೆ ಪೂಜೆ ಸಲ್ಲಿಸಿದ ನಂತರ ಅಪಾರ ಭಕ್ತರ ಸಮಾ ಗಮದಲ್ಲಿ ತೇರನ್ನು ಎಳೆದು ದೇವಾಲಯದ ಸುತ್ತ ಪ್ರದಕ್ಷಿಣೆ ಹಾಕಲಾಯಿತು, ರಥೋತ್ಸವಕ್ಕೆ ಬಂದಂತಹ ಜನತೆಗೆ ಹಲವು ಮಜ್ಜಿಗೆ, ಕೋಸಂಬರಿ, ಪಾನಕದ ಜೊತೆಗೆ ಅನ್ನದಾನವನ್ನು ಭಕ್ತರು ಆಯೋಜಿಸಿದ್ದರು.
Leave a Review