ಮೈಸೂರು: ಮಾರ್ಚ್ 17ರ ನಂತರ ಚುನಾವಣಾ ರಾಜಕೀಯ ನಿವೃತ್ತಿ ಪಡೆಯುವುದಾಗಿ ಚಾಮರಾಜನಗರ ಕ್ಷೇತ್ರದ ಸಂಸದ ಹಾಗೂ ಬಿಜೆಪಿಯ ಹಿರಿಯ ಮುಖಂಡು ವಿ. ಶ್ರೀನಿವಾಸ್ ಪ್ರಸಾದ್ ಘೋಷಣೆ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಮಾರ್ಚ್ 17ರ ನಂತರ ರಾಜಕೀಯ ನಿವೃತ್ತಿ ಪಡೆಯುವುದಾಗಿ ಹೇಳಿರುವ ಅವರು ಮುಂದಿನ ಚುನಾವಣೆಯಲ್ಲಿ ಬಹಿರಂಗ ಪ್ರಚಾರಕ್ಕೆ ತೆರಳುವುದಿಲ್ಲ. ಆದರೆ ಬಿಜೆಪಿಗೆ ಮತ ನೀಡಿ ಎಂದು ಎಲ್ಲರಲ್ಲೂ ಕೇಳಿಕೊಳ್ಳುತ್ತೇನೆ ಎಂದಿದ್ದಾರೆ.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ಸಿದ್ದರಾಮಯ್ಯ ಬಾವಿ ಒಳಗಿನ ಕಪ್ಪೆಯಿಂದ್ದಂತೆ ಪಧಾನಿ ಮೋದಿ ಸಮುದ್ರದಲ್ಲಿ ಈಜಿರುವ ನಾಯಕ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ.ಮೋದಿ ಜನಪರ ಕಾರ್ಯಗಳ ಮುಂದೆ ಸಿದ್ದರಾಮಯ್ಯನವರ ಕಾರ್ಯಗಳ ಯಾವುದೇ ಆಟ ನಡೆಯಲ್ಲ ಎಂದು ಟೀಕಿಸಿದ್ದಾರೆ.