ಬೆಂಗಳೂರು: ಕರ್ನಾಟಕ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ವೆಬ್ಸೈಟ್ನಲ್ಲಿ ಪ್ರಕಟವಾಗಿದ್ದು ಈ ಬಾರಿ ಶೇಕಡ 91.6 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಆಗಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗೋಷ್ಠಿ ನಡೆಸಿದರು.
2025 26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡ 91.6 ಮಕ್ಕಳು ತೆರಗಡೆಯಾಗಿದ್ದಾರೆ. 7,70,209 ಮಕ್ಕಳು ಪರೀಕ್ಷೆ ಬರೆದಿದ್ದರು, ಎಲ್ಲರೂ ಕೂಡ ಪರೀಕ್ಷೆಯಲ್ಲಿ ತೇರ್ಗಡೆಯಾಗಿದ್ದಾರೆ ಎಂದರು. ಇನ್ನೂ ಈ ಬಾರಿ ಎಸ್ ಎಸ್ ಎಲ್ ಸಿ ಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ದ್ವಿತೀಯ ಸ್ಥಾನ ಪಡೆದಿದೆ. ಹಾಗೂ ಉತ್ತರ ಕನ್ನಡ ಜಿಲ್ಲೆ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ತೃತೀಯ ಸ್ಥಾನ ಪಡೆದಿದೆ ಎಂದು ತಿಳಿದುಬಂದಿದೆ.
ಇನ್ನು ಫಲಿತಾಂಶದಲ್ಲಿ ಕಲ್ಬುರ್ಗಿ ಜಿಲ್ಲೆಗೆ ಕೊನೆಯ ಸ್ಥಾನ ಲಭಿಸಿದೆ ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಮತ್ತೆ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಇನ್ನು ಗ್ರಾಮೀಣ ಭಾಗದ ಮಕ್ಕಳಿಂದ ಉತ್ತಮ ಸಾಧನೆಯಾಗಿದೆ ಎಂದು ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ತಿಳಿಸಿದರು.
ಇನ್ನು ಈ ಬಾರಿಯೂ ಕೂಡ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. 625 ಕ್ಕೆ 625 ಅಂಕಗಳನ್ನು 7 ವಿದ್ಯಾರ್ಥಿಗಳು ಗಳಿಸಿದ್ದಾರೆ. ಬೆಳಗಾವಿಯ ರೂಪ ಚೆನ್ನಗೌಡ ಪಾಟೀಲ್ ಗೆ 625ಕ್ಕೆ 625 ಹಾಸನದ ಜಾನವಿ ಹಾಗೂ ಉತ್ಸವ್ ಪಾಟೀಲ್ 625 ಕ್ಕೆ 625 ಅಂಕಗಳು ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ವಿದ್ಯಾರ್ಥಿಗಳು ಮಧ್ಯಾಹ್ನ 12 ಗಂಟೆಯ ನಂತರ https://www.digilocker.gov.in ವೆಬ್ಸೈಟ್ಗೆ ಭೇಟಿ…
ಜಿಲ್ಲೆ = ಶೇ.ಫಲಿತಾಂಶ
ದಕ್ಷಿಣ ಕನ್ನಡ ಜಿಲ್ಲೆ – 98.40%
ಉಡುಪಿ – 98.18%
ಉತ್ತರ ಕನ್ನಡ – 98.09%
ಹಾಸನ – 97.51%
ಮಂಡ್ಯ – 97.45%
ಶಿರಸಿ – 97.21%
ಹಾವೇರಿ – 96.87%
ಕೊಡಗು – 96.70%
ಶಿವಮೊಗ್ಗ – 96.56%
ವಿಜಯನಗರ – 96.39%
ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ ಶೇ. 94.10 ರಷ್ಟು ವಿದ್ಯಾರ್ಥಿಗಳು ತೇರ್ಗಡೆ | ದಕ್ಷಿಣಕನ್ನಡಕ್ಕೆ ಪ್ರಥಮ, ಉಡುಪಿ ದ್ವಿತೀಯ, ಉತ್ತರಕನ್ನಡಕ್ಕೆ ತೃತೀಯ ಸ್ಥಾನ: ಮಧು ಬಂಗಾರಪ್ಪ



