ಚೆನ್ನೈ; ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಮುಖ್ಯಮಂತ್ರಿ ಹಾಗೂ ಡಿಎಂಕೆ ವರಿಷ್ಠ ಎಂ.ಕೆ. ಸ್ಟಾಲಿನ್ ಅವರು ಇಂದು ಬೆಳಿಗ್ಗೆ ಮೆಟ್ರೋ ರೈಲಿನಲ್ಲಿ ಪ್ರಯಾಣಿಸುವ ಮೂಲಕ ಮತಯಾಚನೆ ಮಾಡಿದ್ದಾರೆ. ಚೆನ್ನೈನ ಸೆಂಟ್ರಲ್ ಸ್ಟೇಷನ್ನಿಂದ ನಿಲ್ದಾಣದವೊಂದರವರೆಗೆ ಪ್ರಯಾಣ ಮಾಡಿದ ಅವರು ಪ್ರಯಾಣಿಕರಲ್ಲಿ ಮತಯಾಚನೆ ಮಾಡಿ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ.



