2020ನೇ ವರ್ಷ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿ ಘೋಷಣೆಯಾಗಿದೆ. ಇತ್ತೀಚೆಗೆ 2019ನೇ ಸಾಲಿನ ರಾಜ್ಯ ಪ್ರಶಸ್ತಿ ಘೋಷಣೆಯಾಗಿತ್ತು. ಅತ್ಯುತ್ತಮ ನಟ ಪ್ರಶಸ್ತಿಯನ್ನು ಕಿಚ್ಚ ಸುದೀಪ್ಗೆ ನೀಡಲಾಗಿತ್ತು. ಆದರೆ, ಈ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ಒಲ್ಲೆ ಎಂದಿದ್ದರು. ಈ ಬಗ್ಗೆ ವಾದ-ವಿವಾದಗಳು ನಡೆಯುತ್ತಿರುವಾಗಲೇ 2020ನೇ ಸಾಲಿನ ಪ್ರಶಸ್ತಿಯನ್ನು ಘೋಷಣೆಯಾಗಿದೆ.
2020ನೇ ಸಾಲಿನಲ್ಲಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಪ್ರಜ್ವಲ್ ದೇವರಾಜ್ ಪಾಲಾಗಿದೆ. ಹಾಗೇ ಅತ್ಯುತ್ತಮ ನಟಿ ಪ್ರಶಸ್ತಿಗೆ ಅಕ್ಷತಾ ಪಾಂಡವಪುರ ಆಯ್ಕೆಯಾಗಿದ್ದಾರೆ. ‘ಜಂಟಲ್ಮ್ಯಾನ್’ ಸಿನಿಮಾದ ಅದ್ಭುತ ನಟನೆಗೆ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಹಾಗೇ ‘ಪಿಂಕಿ ಎಲ್ಲಿ?’ ಸಿನಿಮಾ ಅಭಿನಯಕ್ಕಾಗಿ ಅಕ್ಷತಾ ಪಾಂಡವಪುರ ಅವರನ್ನು ಆಯ್ಕೆ ಮಾಡಲಾಗಿದೆ.
ಅಂದ್ಹಾಗೆ 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿಯ ಮುಂದಾಳತ್ವವನ್ನು ಬಿ.ಎಸ್. ಲಿಂಗದೇವರು ವಹಿಸಿಕೊಂಡಿದ್ದರು.
ಈ ಆಯ್ಕೆ ಸಮಿತಿ ಸುಮಾರು 66 ಸಿನಿಮಾಗಳನ್ನು ವೀಕ್ಷಣೆ ಮಾಡಿ ಹಲವು ವಿಭಾಗಗಳಿಗೆ ಸಿನಿಮಾಗಳನ್ನು ಆಯ್ಕೆ ಮಾಡಿದ್ದಾರೆ. ಇದರಲ್ಲಿ ‘ಪಿಂಕಿ ಎಲ್ಲಿ?’, ‘ವರ್ಣಪಟಲ’, ‘ಹರಿವ ನದಿಗೆ ಮೈಯೆಲ್ಲಾ ಕಾಲು’ ಸಿನಿಮಾಗಳಿಗೆ ಮೂರು ಅತ್ಯುತ್ತಮ ಪ್ರಶಸ್ತಿಗಳನ್ನು ನೀಡಲಾಗಿದೆ. ಈ ಪ್ರಮುಖ ಪ್ರಶಸ್ತಿಗಳ ಹೊರತಾಗಿ ಬೇರೆ ಬೇರೆ ವಿಭಾಗಗಳಲ್ಲಿ ಪ್ರಶಸ್ತಿಗಳನ್ನು ಆಯ್ಕೆ ಮಾಡಲಾಗಿದೆ. ಒಟ್ಟು 28 ವಿಭಾಗಗಳಲ್ಲಿ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಆ ಎಲ್ಲಾ ಪ್ರಶಸ್ತಿಗಳ ಸಂಪೂರ್ಣ ಪಟ್ಟಿ ಇಲ್ಲಿದೆ.