ಸಮಾವೇಶ: ಚನ್ನಬಸವ ಜಾನೇಕಲ್ ಧಾರವಾಡ: ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ, ಕರ್ನಾಟಕದ ವತಿ ಯಿಂದ ೧೭ ಅಕ್ಟೋಬರ್ ೨೦೨೫ ಬೆಳಿಗ್ಗೆ
೧೦.೩೦ ಧಾರವಾಡದ ಕ.ವಿ.ವ. ಸಂಘದ ನಾಡೋಜ ಪಾಟೀಲ್ ಪುಟ್ಟಪ್ಪ ಸಭಾಭವನದಲ್ಲಿ ರಾಜ್ಯ ಮಟ್ಟದ ಉದ್ಯೋಗಾಕಾಂಕ್ಷಿಗಳ ಆಗ್ರಹ ಸಮಾವೇಶವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಕರ್ನಾಟಕದ ರಾಜ್ಯ ಕಾರ್ಯದರ್ಶಿ ಚನ್ನಬಸವ ಜಾನೇಕಲ್ ತಿಳಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಅತಿಥಿಗಳಾಗಿ ಮಾಜಿ ಲೋಕಾಯುಕ್ತರು, ಕರ್ನಾಟಕ ಹಾಗೂ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶರಾದ
ಜಸ್ಟೀಸ್ ಸಂತೋಷ್ ಹೆಗಡೆ ಮತ್ತು ಹಿರಿಯ ಸಾಮಾಜಿಕ ಹೋರಾಟಗಾರರು ಹಾಗೂ ಸಿಟಿಜನ್ಸ್ ಫಾರ್ ಡೆಮಾಕ್ರಸಿಯ ರಾಷ್ಟಿçÃಯ ಅಧ್ಯಕ್ಷರಾದ ಎಸ್. ಆರ್.
ಹಿರೇಮಠ ಆಗಮಿಸುತ್ತಿದ್ದಾರೆ ಎಂದರು. ರಾಜ್ಯದಲ್ಲಿ ಯುವಜನತೆ ನಿರುದ್ಯೋ ಗದಿಂದ ಕಂಗಾಲಾಗಿದ್ದಾರೆ. ಉದ್ಯೋಗ ಪಡೆಯಲು ಅವಿರತ ಅಧ್ಯಯನ ಪರಿಶ್ರಮ
ನಡೆಸಿದರೂ ಸಹ ಯಾವುದೇ ನೇಮಕಾತಿ ಪ್ರಕ್ರಿಯೆಗಳು ನಡೆಯದೇ ಬೇಸತ್ತಿದ್ದಾರೆ.
ಭವಿಷ್ಯದ ಬಗ್ಗೆ ಭರವಸೆ ಕಳೆದುಕೊಂಡು ಸಿನಿಕತೆಗೆ ಬಲಿಯಾಗುತ್ತಿದ್ದಾರೆ ಎಂದರು. ನಮ್ಮ ರಾಜ್ಯದಲ್ಲಿ ಹಿಂದೆ ಅಧಿಕಾರ ನಡೆಸಿದ ಬಿಜೆಪಿ ಸರ್ಕಾರ ಖಾಲಿ ಹುದ್ದೆಗಳ ಭರ್ತಿಗೆ ಯಾವುದೇ ಪ್ರಯತ್ನ ಮಾಡಲಿಲ್ಲ. ಬಿಜೆಪಿ ಪಕ್ಷದ ವೈಫಲ್ಯಗಳನ್ನು ಎತ್ತಿ ತೋರಿಸುತ್ತಾ, ಕಾಂಗ್ರೆಸ್ ಪಕ್ಷವು ತಾನು ಅಧಿಕಾರಕ್ಕೆ ಬಂ
ದರೆ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಭರವಸೆಯನ್ನು ನೀಡಿತ್ತು. ಆದರೆ ಅಧಿಕಾರಕ್ಕೆ ಬಂದು ೨ ವರ್ಷ ೪ ತಿಂಗಳು ಕಳೆದರೂ ಸº ಒಳ ಮೀಸಲಾತಿ ನಿರ್ಧಾರದ ಹೆಸರಿನಲ್ಲಿ ಯಾವುದೇ ನೇಮಕಾತಿಯನ್ನು ಮಾಡಿಲ್ಲ. ತಾನು ನೀಡಿದ ಉದ್ಯೋಗದ ಗ್ಯಾರಂಟಿಯನ್ನು ಅಧಿಕಾರಕ್ಕೆ ಬಂದ ನಂತರ ಕಾರ್ಯ ರೂಪಕ್ಕೆ ತರುವುದೆಂದು ಯುವಜನತೆ ನಿರೀಕ್ಷೆಯಲ್ಲಿದ್ದರು. ಆದರೆ ಅವರ ನಿರೀಕ್ಷೆ ಹುಸಿಯಾಗಿದೆ ಎಂದರು. ೨೦೨೫-೨೬ನೇ ಸಾಲಿಗೆ ರಾಜ್ಯದ ೪೩ ಇಲಾಖೆಗಳಲ್ಲಿ ೨,೮೪,೮೮೧ ಹುದ್ದೆಗಳು ಖಾಲಿ ಬಿದ್ದಿವೆ.
ಅವುಗಳ ನೇಮಕಕ್ಕೆ ಕಿಂಚಿತ್ತೂ ಪ್ರಯತ್ನಗಳು ನಡೆಯುತ್ತಿಲ್ಲ. ಒಂದಿಲ್ಲೊAದು ನೆಪಗಳನ್ನು ಹೇಳುತ್ತಾ ನೇಮಕಾತಿಗಳನ್ನು ಮುಂದೂಡಲಾಗುತ್ತಿದೆ. ರಾಜ್ಯದ ಎಲ್ಲೆಡೆ ಲಕ್ಷಾಂತರ ಉದ್ಯೋಗಾಕಾಂಕ್ಷಿ ಯುವಜನರು ಸರ್ಕಾರ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸಬಹುದು ಎಂದು ಹಲವಾರು ವರ್ಷಗಳಿಂದ ಪರೀಕ್ಷೆಗಳ ತಯಾರಿ ನಡೆಸುತ್ತಿದ್ದಾರೆ. ೪-೫ ವರ್ಷಗಳಿಂದ ನೇಮಕಾತಿಗಳೇ ನಡೆಯದಿರುವುದರಿಂದ ಅದೆಷ್ಟೋ ಯುವಜನರು ತಮ್ಮ ಅರ್ಹತಾ ವಯಸ್ಸನ್ನು ಮೀರಿದ್ದಾರೆ. ಉದ್ಯೋಗದ ಭರವಸೆಯಿಲ್ಲದೆ ಯುವಜನರು ಆತ್ಮಹತ್ಯೆಯಂತಹ ಕಠಿಣ, ನೋವಿನ ನಿರ್ಧಾರಕ್ಕೆ ಮೊರೆಹೋಗುತ್ತಿದ್ದಾರೆ ಎಂದರು.