ಕರ್ನಾಟಕ ಸಂಪಾದಕರ ಮತ್ತು ವರದಿಗಾರ ಸಂಘ ಹಾಗೂ ಕರ್ನಾಟಕ ದಿನಪತ್ರಿಕೆಗಳ ಸಂಘದ ವತಿಯಿಂದ ರಾಜ್ಯಮಟ್ಟದ ಪತ್ರಕರ್ತರ ಕಾರ್ಯಾಗಾರವನ್ನು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ. ಎಚ್. ಮುನಿಯಪ್ಪ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಸ್ಮರಣೆ ಸಂಚಿಕೆ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರೊ.ಮುಕುಂದ ರಾಜ್,ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಆಯೇಷಾ ಖಾನಮ್, ಕರ್ನಾಟಕ ರಾಜ್ಯ ಪೌರ ಸೇನಾ ನೌಕರರ ಸೇವಾ ಸಂಘ ರಾಜ್ಯಾಧ್ಯಕ್ಷರಾದ ಶೈಲಾ ಕೆ.ಡಿ., ಆಕಾಶವಾಣಿ ಮತ್ತು ದೂರದರ್ಶನ ಕೇಂದ್ರ ಬೆಂಗಳೂರು ನಿರ್ದೇಶಕರಾದ ಡಾ. ನಿರ್ಮಲ ಸಿ. ಯಲಿಗಾರ್, ಇಂದುಸAಜೆ ಪತ್ರಿಕೆಯ ವ್ಯವಸ್ಥಾಪಕ ಸಂಪಾದಕರಾದ ಡಾ.ಜಿ.ವೈ. ಪದ್ಮನಾಗರಾಜು, ಕೆರಾ ರಾಜ್ಯಾಧ್ಯಕ್ಷ ಜಿ. ನಾಗರಜ್, ಕರ್ನಾಟಕ ದಿನಪತ್ರಿಕೆಗಳ ಸಂಘ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ಚೆನ್ನಬಸವ ಬಾಗಲವಾಡ ಸೇರಿದಂತೆ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.



