ದೆಹಲಿ: ದೆಹಲಿಯ ಕೆಂಪುಕೋಟೆ ಪ್ರದೇಶದಲ್ಲಿ ಭಯೋತ್ಪಾದಕ ಕೃತ್ಯವೆಸಗಲು ಅಲ್ಖೈದ ಉಗ್ರ ಸಂಘಟನೆ ಸಂಚು ರೂಪಿಸಿದೆ ಎಂದು ಗುಪ್ತಚರ ವರದಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಕೆಂಪುಕೋಟೆ ಪ್ರದೇಶದಲ್ಲಿ ಕಟ್ಟುನಿಟ್ಟಿನ ಎಚ್ಚರಿಕೆ ವಹಿಸಲಾಗಿದೆ. ಗುಪ್ತಚರ ವರದಿ ಲಭ್ಯವಾಗುತ್ತಿದ್ದಂತೆ ಕಾರ್ಯಪ್ರವೃತ್ತರಾದ ದೆಹಲಿ ಪೊಲೀಸರು ಹೈ ಅಲರ್ಟ್ ಘೋಷಿಸಿದ್ದಾರೆ. ಈ ಹಿಂದೆ ಈ ಪ್ರದೇಶದಲ್ಲಿ ಕಾರೊಂದು ಸ್ಫೋಟಗೊಂಡಿದ್ದ ಪರಿಣಾಮ ನಡೆದ ಅಹಿತಕರ ಘಟನೆ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಪೊಲೀಸರು ಮುನ್ನೆಚ್ಚರಿಕಾ ಕ್ರಮವಾಗಿ ಬಿಗಿಬಂದೋಬಸ್ತ್ ಕೈಗೊಂಡಿದ್ದಾರೆ. ಎಲ್ಲೆಡೆ ಹೆಚ್ಚುವರಿ ಪೊಲೀಸರನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ.



