ಬೆAಗಳೂರು : ರಾಜ್ಯದಲ್ಲಿ ಆರ್ಎಸ್ಎಸ್ ಚಟುವಟಿಕೆಗಳಿಗೆ ಕಡಿವಾಣ ಹಾಕಬೇಕು ಎಂದು ಪ್ರಿಯಾAಕ ಖರ್ಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದ ಬೆನ್ನಲ್ಲೇ ಪ್ರಿಯಾಂಕ ಖರ್ಗೆ ಅವರಿಗೆ ನಿರಂತರವಾಗಿ ಬೆದರಿಕೆ ಕರೆಗಳು ಬರುತ್ತಿವೆ. ಈ ಕುರಿತು ಸಚಿವ ಪ್ರಿಯಾಂಕ ಖರ್ಗೆ ಇಂದು ಟ್ವೀಟ್ ನಲ್ಲಿ ವಿಡಿಯೋ ಸಹ ರಿಲೀಸ್ ಮಾಡಿದ್ದಾರೆ. ಈ ವಿಚಾರವಾಗಿ ಪರಮೇಶ್ವರ ಬೆದರಿಕೆ ಕರೆ ಹಾಕುತ್ತಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಈ ಕುರಿತು ತನಿಖೆಗೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಬೆಂಗಳೂರಲ್ಲಿ ಈ ಕುರಿತು ಮಾತನಾಡಿದ ಅವರು ಪ್ರಿಯಾಂಕ ಖರ್ಗೆ ಬೆದರಿಕೆಗೆ ಪರಮೇಶ್ವರ್ ಸೂಚನೆ ನೀಡಿದ್ದು ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಯಾರು ಬೆದರಿಕೆ ಹಾಕಿದ್ದಾರೆ ಎಲ್ಲಿಂದ ಬೆದರಿಕೆ ಬಂದಿದೆ ಎನ್ನುವುದರ ಕುರಿತು ಎಲ್ಲವನ್ನು ತನಿಖೆ ಮಾಡುತ್ತೇವೆ. ಒಬ್ಬ ಸಚಿವರು ತಮ್ಮ ಅಭಿಪ್ರಾಯ ಹೇಳಿರಬಹುದು. ಆದರೆ ಸರ್ಕಾರದ ತೀರ್ಮಾನ ಆಗೋದೇ ಬೇರೆ ಹಾಗಾಗಿ ಸಚಿವರಿಗೆ ಬೆದರಿಕೆ ಹಾಕುವುದು ಸರಿಯಲ್ಲ ಅದಕ್ಕೆ ಏನು ಕ್ರಮ ಕೈಗೊಳ್ಳಬೇಕು ತೆಗೆದುಕೊಳ್ಳುತ್ತೇವೆ ಎಂದರು.