ಕನಕಪುರ: ಅಂಚೆ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಗ್ರಾಮೀಣ ಅಂಚೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಅಂಚೆ ಕಚೇರಿಯ ಮುಂಭಾಗ ಅನಿರ್ದಿಷ್ಟ ಕಾಲ ಮುಷ್ಕರವನ್ನು ನಡೆಸಿದರು.ಬುಧವಾರ ಬೆಳಿಗ್ಗೆ ಗ್ರಾಮೀಣ ಭಾಗದ ಅಂಚೆ ನೌಕರರು ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದ ವತಿಯಿಂದ ಧರಣಿಯನ್ನು ನಡೆಸಿದರು.
ಸಂಘದ ತಾಲೂಕು ಉಪಾಧ್ಯಕ್ಷ ಗೋವಿಂದರಾಜು ಮಾತನಾಡಿ, ಅಂಚೆ ಇಲಾಖೆಯಲ್ಲಿ ಹಲವಾರು ಷ್ಘಳಿಂದ ಸೇವೆ ಸಲ್ಲಿಸುತ್ತಿರುವ ನೌಕರರ ಜೀವನೋಪಾಯಕ್ಕೆ ತೊಂದರೆಯಾಗಿದೆ. ಇಗ ನಾವು 5 ಗಂಟೆಗಳ ಕಾಲ ಕರ್ತವ್ಯವನ್ನು ನಿರ್ವಹಿಸುವ ಪದ್ದತಿ ಇದೆ ಅದನ್ನು 8 ಗಂಟೆಗಳ ಕಾಲ ಪರಿಗಣಿಸಿ ವೇತವನ್ನು ಹೆಚ್ಚಿಸಬೇಕು, ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರಿಗೂ ಹಾಗೂ ಹೊಸ ನೇಮಕಾತಿಯಲ್ಲಿ ಆಯ್ಕೆಯಾದ ನೌಕರರಿಗೂ ಒಂದೇ ರೀತಿ ವೇತನ ನೀಡಲಾಗುತ್ತಿದೆ.
ಹಿರಿತನದ ಆಧಾರದ ಮೇಲೆ ಹೆಚ್ಚಿನ ವೇತನ ನೀಡುವುದು, ಈಗಾಗಲೇ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ನೌಕರರಂತೆ ಇತತರೆ ನೌಕರರಿಗೂ ಸಹ ಸೌಲಭ್ಯಗಳನ್ನು ನೀಡಬೇಕೆಂದು ಒತ್ತಾಯಿಸಿದರು.ಸಂಘಟನೆ ಕಾರ್ಯದರ್ಶಿ ಮಹೇಶ್, ಸದಸ್ಯರಾದ ವಿಶ್ವನಾಥ್, ಶಿವರಾಮು, ನವೀನ, ಶ್ರೀಧರ್ಶೆಟ್ಟಿ ಸೇರಿದಂತೆ ಹಲವರು ಭಾಗವಹಿಸಿದ್ದರು