ದೊಡ್ಡಬಳ್ಳಾಪುರ: ಯುವ ಜನತೆ ಮಾದಕವಸ್ತುಗಳಿಂದ ದೂರ ಉಳಿಯುವ ಮೂಲಕ ಉತ್ತಮ ಸಾಧನೆ ಹಾಗೂ ದೇಶಕ್ಕೆ ಉತ್ತಮ ಕೊಡುಗೆ ನೀಡಲು ಸಾದ್ಯ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾಧೀಕ್ ಪಾಷಾ ಅವರು ತಿಳಿಸಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ನಗರ ಪೊಲೀಸ್ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಮಾದಕ ವಸ್ತುಗಳ ದುರುಪಯೋಗ ಹಾಗೂ ಅಕ್ರಮ ಸಾಗಾಣೆ ವಿರುದ್ಧದ ಅಂತರಾಷ್ಟ್ರೀಯ ದಿನದ ಜಾಗೃತಿ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಅರಿವಿಲ್ಲದೆಯೇ ಮಾದಕ ವಸ್ತುಗಳ ಚಟಕ್ಕೆ ಬಳಿಯಾಗುತ್ತೀರುವುದು ವಿಪರ್ಯಾಸವೆಂದರೆ ತಪ್ಪಾಗಲಾರದು.
ಕೆಲ ಸಮಾಜಘಾತುಕರು ವಿದ್ಯಾರ್ಥಿಗಳನ್ನೇ ಗುರಿಯಾಗಿರಿಸಿಕೊಂಡು ಅಕ್ರಮವಾಗಿ ಸರಬರಾಜು ಮಾಡುವವರ ಬಗ್ಗೆ ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನ ಜರುಗಿಸುತ್ತಾ ಬಂದಿದೆ, ವಿದ್ಯಾರ್ಥಿಗಳು ಇಂತಹ ವಿಚಾರಗಳು ಕಂಡುಬಂದಲ್ಲಿ ತಕ್ಷಣ ಪೋಲಿಸರ ಗಮನಕ್ಕೆ ತರಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಕ್ರೈಂ ಸಬ್ ಇನ್ಸ್ಪೆಕ್ಟರ್ ರೇವಣ್ಣ ದೊಡ್ಡಬಳ್ಳಾಪುರ ನಗರ ಠಾಣೆ ಇನ್ಸ್ಪೆಕ್ಟರ್ ದಯಾನಂದ್ ಅವರು ಸಹ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.
ಈ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಸುಜಾತ ಎಸ್ ಜಂಬಗಿ ವಹಿಸಿದ್ದರುಮಂಗಳ ಗೌರಿ ಕಾರ್ಯಕ್ರಮದ ನಿರೂಪಣೆ, ಟಿ.ಆರ್ ಶ್ರೀರಾಮ ಗೌಡ ಸ್ವಾಗತ ಕೋರಿದರು ಕಾಲೇಜಿನ ಉಪನ್ಯಾಸಕರು ಉಪಸ್ಥಿತರಿದ್ದರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.