ಬೆಂಗಳೂರು: ಹಾಸ್ಟೆಲ್ ಕಟ್ಟಡದ ಮಹಡಿಯಿಂದ ಕೆಳಗೆ ಬಿದ್ದು ವಿದ್ಯಾರ್ಥಿ ಮೃತಪಟ್ಟಿರುವ ದುರ್ಘಟನೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇನಹಳ್ಳಿ ಬಳಿಯಿರುವ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ.
ಆಂಧ್ರದ ಕರ್ನೂಲ್ ಮೂಲದ ದಾಸರಿ ಬ್ರಹ್ಮಸಾಯಿರೆಡ್ಡಿ ಎಂಬ ವಿದ್ಯಾರ್ಥಿ ನಿನ್ನೆ ರಾತ್ರಿ ಊಟ ಮಾಡಿದ ಬಳಿಕ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ.
ಮೊದಲನೆ ವರ್ಷದ ಬಿಟೆಕ್ ವ್ಯಾಸಂಗ ಮಾಡುತ್ತಿದ್ದ ದಾಸರಿ ಬ್ರಹ್ಮಸಾಯಿರೆಡ್ಡಿ, ರಾತ್ರಿ ಊಟ ಮಾಡಿ ತನ್ನ ಕೋಣೆಗೆ ಮರಳಿದ್ದ. ಈ ವೇಳೆ ಮಹಡಿ ಮೇಲಿಂದ ಬಿದ್ದು ಮೃತಪಟ್ಟಿದ್ದಾನೆ.ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.