ಬೇಲೂರು: ಇತ್ತೀಚಿನ ದಿನಗಳಲ್ಲಿ ಎಲ್ಲ ಕ್ಷೇತ್ರಗಳಲ್ಲೂ ತಾಲೂಕಿನ ಜನರು ಸಾಧನೆ ಮಾಡುತಿದ್ದಾರೆ. ಅದೇ ರೀತಿ ಕ್ರೀಡಾ ಕ್ಷೇತ್ರದಲ್ಲಿ ಅರೇಹಳ್ಳಿ ಮಲ್ನಾಡ್ ಆಂಗ್ಲಾ ಮಾಧ್ಯಮ ಶಾಲೆಯ 7ನೇ ತರಗತಿ ವಿದ್ಯಾರ್ಥಿನಿ ಜ್ಞಾನೇಶ್ವರಿ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಭಾಗವಹಿಸುತ್ತಿರುವುದು ನಮಗೆ ಹೆಮ್ಮೆ ತರಿಸಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಪಿ.ನಾರಾಯಣ್ ಹೆಳಿದರು.
ಶಾಲಾ ಶಿಕ್ಷಣಾ ಹಾಗೂ ಸಾಕ್ಷರತಾ ಇಲಾಖೆಯಿಂದ ಉತ್ತರ ಪ್ರದೇಶದ ಲಕ್ನೋದಲ್ಲಿ ಆಯೋಜಿಸಿರುವ ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲಿ ಬಾಗವಹಿಸಲು ತೆರಳುತ್ತಿರುವ ವಿದ್ಯಾರ್ಥಿನಿ ಜ್ಞಾನೇಶ್ವರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯಲ್ಲಿ ಸನ್ಮಾನಿಸಿ ಬೀಳ್ಕೊಟ್ಟು ಮಾತನಾಡಿದ ಅವರು, ಇತ್ತೀಚಿನ ವರ್ಷ ಹಾಗೂ ದಿನಗಳಲ್ಲಿ ಬೇಲೂರು ತಾಲೂಕಿನಲ್ಲಿ ಸಾಕಷ್ಟು ಕ್ರೀಡಾಪಟುಗಳು ವಿವಿಧ ಕ್ರೀಡೆ ಹಾಗೂ ಕ್ಷೇತ್ರಗಳಲ್ಲಿ ಉತ್ತಮ ಸಾಧನೆಯೊಂದಿಗೆ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಗುರುತಿಸಿ ಕೊಳ್ಳುತ್ತ ಬೇಲೂರಿಗೆ ಕೀರ್ತಿ ತಂದಿದ್ದಾರೆ.
ಅದೇ ರೀತಿ ಕೆಲ ದಿನಗಳ ಹಿಂದೆ ಉಡುಪಿಯಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ತಾಲೂಕಿನ ಅರೇಹಳ್ಳಿ ಮಲ್ನಾಡ್ ಆಂಗ್ಲಾ ಮಾಧ್ಯಮ ಶಾಲೆ ವಿದ್ಯಾರ್ಥಿನಿ 14 ವರ್ಷದೊಳಗಿನ ವಿಭಾಗದ ಉದ್ದ ಜಿಗಿತದಲ್ಲಿ ರಾಜ್ಯಕ್ಕೆ ಪ್ರಥಮ ಸ್ತಾನ ಪಡೆದಿದ್ದು, ರಾಷ್ಟ್ರ ಮಟ್ಟದ ಕ್ರೀಡಾ ಕೂಟದಲ್ಲೂ ಉತ್ತಮ ಸಾಧನೆ ಮಾಡಲಿ. ಮತ್ತು ಸ್ಪೂರ್ತಿ ತುಂಬುವ ಉದ್ದೇಶದಿಂದ ಬಾಲಕಿಯನ್ನು ಇಲಾಖೆಯಿಂದ ಸನ್ಮಾನಿಸಿ ಶುಭಕೋರಿ ಕಳುಹಿಸಿ ಕೊಡುತಿದ್ದೇವೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ದೈಹಿಕ ಶಿಕ್ಷಣ ಪರಿವೀಕ್ಷಕ ಪಾಲಾಕ್ಷ ಮೂರ್ತಿ ಮಾತನಾಡಿ, ಶಾಲಾ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಕಳೆದ ಕೆಲ ದಿನಗಳ ಹಿಂದೆ ಉಡುಪಿಯಲ್ಲಿನ ರಾಜ್ಯ ಮಟ್ಟದ ಕ್ರೀಡಾ ಕೂಟದಲ್ಲಿ ತಾಲೂಕಿನ ಅರೇಹಳ್ಳಿ ಮಲ್ನಾಡ್ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿನಿ ಜ್ಞಾನೇಶ್ವರಿ, ಉದ್ದ ಜಿಗಿತದಲ್ಲಿ ಪ್ರಶಸ್ತಿ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಕಿರ್ತಿ ತಂದಿದ್ದಾರೆ. ನಾಳೆಯಿಂದ ಉತ್ತರ ಪ್ರಧೇಶದಲ್ಲಿ ನಡೆಯಲಿರುವ ಕ್ರೀಡಾ ಕೂಟದಲ್ಲಿ ಬಾಗವಹಿಸಿ ಪ್ರಶಸ್ತಿ ಪಡೆದು ರಾಜ್ಯ, ಜಿಲ್ಲೆ, ತಾಲೂಕಿಗೆ ಕೀರ್ತಿ ತರುವಂತ್ತಾಗಲಿ ಎಂದರು.
ಕ್ಷೇತ್ರ ಸಂಪನ್ಮೂಲ ಅಧಿಕಾರಿ ಶಿವಮರಿಯಪ್ಪ, ಅರೇಹಳ್ಳಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಪವಿತ್ರ, ತರಬೇತುದಾರ ಜ್ಯೂಲ್ಫಿ, ಇಸಿಒಗಳಾದ ರವಿಕುಮಾರ್, ಮಂಜುನಾಥ್, ಬಿಆರ್ಪಿ ಮಂಜುನಾಥ್, ವಿಶ್ವನಾಥ್ ಸೇರಿದಂತೆ ಸಿಬ್ಬಂದಿ ಇದ್ದರು.