ಬೆಂಗಳೂರು: ನಗರದಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಬಲಿ ತೆಗೆದುಕೊಂಡಿದೆ. ರಾಜಾಜಿನಗರದ ಹರಿಶ್ಚಂದ್ರ ಘಾಟ್ ಬಳಿ ಬಿಎಂಟಿಸಿ ಡಿಕ್ಕಿ ಹೊಡೆದು ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಕುಸುಮಿತಾ (21) ಬಿಎಂಟಿಸಿ ಬಸ್ ಅಪಘಾತಕ್ಕೆ ಬಲಿಯಾದ ವಿದ್ಯಾರ್ಥಿನಿಯಾಗಿದ್ದಾಳೆ.
ಹರಿಶ್ಚಂದ್ರ ಘಾಟ್ ಬಳಿ ಇಂದು ಬೆಳಿಗ್ಗೆ ಕುಸುಮಿತಾ ಕಾಲೇಜಿಗೆ ಹೋಗುವ ವೇಳೆ ಅಪಘಾತಕ್ಕೆ ಬಲಿಯಾಗಿದ್ದಾಳೆ. ಮಲ್ಲೇಶ್ವರಂ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.