ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾದ ದಿನವೇ ಹೆಬ್ಬಾಳದ ಮನೋರಾಯನಪಾಳ್ಯದಲ್ಲಿ ವಿದ್ಯಾರ್ಥಿನಿಯೊಬ್ಬಳು ನಿಗೂಢವಾಗಿ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.ಮನೋರಾಯನಪಾಳ್ಯದಲ್ಲಿ ತನುಶ್ರೀ (18) ಮೃತಪಟ್ಟ ವಿದ್ಯಾರ್ಥಿನಿ. ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿಯ ಶವ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವಂತೆ ಕಂಡುಬಂದಿದೆ. ಆದರೆ, ಸಂಬಂಧಿಕರು ಮಾತ್ರ ವಿದ್ಯಾರ್ಥಿನಿಯ ತಾಯಿಯ ಮೇಲೆಯೇ ಅನುಮಾನ ವ್ಯಕ್ತಪಡಿಸಿದ್ದಾರೆ.ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಆನ್ ಲೈನ್ ನಲ್ಲಿ ಪ್ರಕಟಗೊಂಡ ಕೆಲವೇ ನಿಮಿಷಗಳಲ್ಲಿ ದುರ್ಘಟನೆ ನಡೆದಿದೆ. ಪಿಯುಸಿ ಫಲಿತಾಂಶದಲ್ಲಿ ಅನುತ್ತೀರ್ಣಳಾದ ಕಾರಣ



