ಬೆಂಗಳೂರು: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸೇರಿದಂತೆ ರಾಜ್ಯದ 14 ಲೋಕಸಭಾ ಕ್ಷೇತ್ರಕ್ಕೆ ಮೊದಲನೇ ಹಂತದ ಚುನಾವಣೆ ಪ್ರಕ್ರಿಯೆ ಇಂದಿನಿಂದ ಆರಂಭಗೊಂಡಿದ್ದು, ನಾಮಪತ್ರ ಸಲ್ಲಿಕೆ ಕಾರ್ಯಕ್ಕೆ ಚಾಲನೆ ದೊರೆತಿದೆ.
ಮೊದಲನೇ ಹಂತದಲ್ಲಿ ಬೆಂಗಳೂರು ಗ್ರಾಮಾಂತರ, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ ತುಮಕೂರು, ಮಂಡ್ಯ, ಮೈಸೂರು ಕೊಡುಗು, ಚಾಮರಾಜನಗರ, ಉಡುಪಿ, ಚಿಕ್ಕಮಗಳೂರು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್, ಚಿಕ್ಕಬಳ್ಳಾಪುರ ಕೋಲಾರ ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಇಂದಿನಿಂದ ನಾಮಪತ್ರ ಸಲ್ಲಿಕೆ ಆgಭಿಸಿದ್ದು, ಏ.04 ಕಡೆಯದಿನವಾಗಿದೆ. ಏಪ್ರಿಲ್ 5ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಏ.8ರಂದು ನಾಮಪತ್ರ ಹಿಂಪಡೆಯಲು ಕಡೆಯದಿನವಾಗಿದೆ. ಏ. 26ರಂದು ಮತದನಾನ ನಡೆಯಲಿದ್ದು, ಜೂ. 4ಕ್ಕೆ ಮತ ಎಣಿಕೆ ನಡೆದು ಜೂ.6ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.