ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಲೂಟಿ ಸಂಕಷ್ಟ ಎದುರಾಗಿದೆ. ಆಂಧ್ರದ ಅನುಮತಿ ಬಳಸಿ ರಾಜ್ಯದ ಗಡಿ ಒತ್ತುವರಿ ಮಾಡಿದ್ದ ಆರೋಪಕ್ಕೆ ಸಂಬAಧಿಸಿದAತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಸುದಾಂಶು ದುಲಿಯಾ ನೇತೃತ್ವದಲ್ಲಿ ಸಮಿತಿ ಮಾಡಲಾಗಿತ್ತು.
ಬಳ್ಳಾರಿಗೆ ತಿಂಗಳ ಹಿಂದೆ ಸರ್ವೇಗೆ ಬಂದಿದ್ದ ನಿವೃತ್ತ ನ್ಯಾ. ಸುದಾಂಶು ದುಲಿಯಾ ನೇತೃತ್ವದ ಸಮಿತಿಯಿಂದ ಗಡಿ ಒತ್ತುವರಿ ಬಗ್ಗೆ ವರದಿ ಸಲ್ಲಿಕೆ ಮಾಡಲಾಗಿದೆ.
ಆಂಧ್ರದ ರಾಯದುರ್ಗ
ತಾಲೂಕಿನ ಮಲಪನಗುಡಿ ಗ್ರಾಮದಲ್ಲಿ ಡ್ರೋಣ್ ಮೂಲಕ ನಡೆದಿದ್ದ ಸರ್ವೇಯಲ್ಲಿ ಜನಾರ್ದನ ರೆಡ್ಡಿ ಒಡೆತನದ ಓಎಂಸಿ ೨ ಹೆಸರಿನಲ್ಲಿ ೩೯.೫೦
ಹೆಕ್ಟೇರ್, ಅಂತರಗAಗಮ್ಮ ಹೆಸರಿನ ೬೮.೫೦
ಹೆಕ್ಟೇರ್ ಪ್ರದೇಶಗಳಲ್ಲಿ ಗಣಿಗುತ್ತಿಗೆ ಪ್ರದೇಶ ಮತ್ತು ಗಡಿಗಳ ಹೊಂದಾಣಿಕೆ ಆಗಿಲ್ಲ. ಹೀಗಾಗಿ ಈ ಕಂಪನಿಗಳು ಕರ್ನಾಟಕ ರಾಜ್ಯದಲ್ಲಿ ಅತಿಕ್ರಮಣ ಮಾಡಿವೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.
ಜನಾರ್ದನ ರೆಡ್ಡಿ ವಿರುದ್ಧ ಗಡಿ ಒತ್ತುವರಿ ಬಗ್ಗೆ ವರದಿ ಸಲ್ಲಿಕೆ



