ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮಾಜಿ ಸಚಿವ ಕೆ. ಸುಧಾಕರ್ ಇಂದು ತಮ್ಮ ಪಕ್ಷದ ಶಾಸಕ ಎಸ್.ಆರ್. ವಿಶ್ವನಾಥ್ ಅವರನ್ನು ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ಸಿಂಗನಾಯಕನ ಹಳ್ಳಿಯಲ್ಲಿರುವ ಎಸ್.ಆರ್. ವಿಶ್ವನಾಥ್ ಅವರ ನಿವಾಸಕ್ಕೆ ತೆರಳಿ ಅವರೊಂದಿಗೆ ಉಪಹಾರ ಸೇವಿಸಿದ್ದಾರೆ. ಈ ಸಮಯದಲ್ಲಿ ಇಬ್ಬರು ಪರಸ್ಪರ ಸಮಾಲೋಚನೆ ನಡೆಸಿ ಚುನಾವಣಾ ರಾಜಕೀಯ ತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
ತದನಂತರ ಸುದ್ದಿಗಾರರೊಂದಿಗೆ ಮಾತನಾಡಿರುವ ವಿಶ್ವನಾಥ್, ತಮ್ಮ ಚರ್ಚಾ ಸಂದರ್ಭದಲ್ಲಿ ಚುನಾವಣೆಯಲ್ಲಿ ಎದುರಾಗುವ ಪಾಸಿಟೀವ್, ನೆಗೆಟೀವ್ ಅಂಶಗಳ ಬಗ್ಗೆ ಸಮಾಲೋಚನೆ ನಡೆಸಿದ್ದೇವೆ. ಇದೊಂದು ಬಾರಿ ಚುನಾವಣೆಗೆ ನಿಲ್ಲುತ್ತೇನೆ ಎಂದು ಸುಧಾಕರ್ ಹೇಳಿದ್ದಾರೆ ಎಂದಿದ್ದಾರೆ.